ಹೊಸ ವರ್ಷಾಚರಣೆ ಸಂಭ್ರಮ ಮುಗಿಸಿ ಹಿಂತಿರುಗುವಾಗ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರು ಸಾವು

Views: 126
ಕನ್ನಡ ಕರಾವಳಿ ಸುದ್ದಿ: ವರ್ಷಾಚರಣೆ ಸಂಭ್ರಮ ಮುಗಿಸಿ ಹಿಂತಿರುಗುವಾಗ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ಚಾಮರಾಜನಗರ ಗುಂಡ್ಲುಪೇಟೆ ತಾಲೂಕಿನ ಕೊಡಸೋಗೆ ಗ್ರಾಮದ ಸಮೀಪ ನಡೆದಿದೆ.
ಬೊಮ್ಮಲಾಪುರ ಸೆಸ್ಕ್ ಕಚೇರಿಯಲ್ಲಿ ಅಸಿಸ್ಟೆಂಟ್ ಪವರ್ ಮ್ಯಾನ್ ಆಗಿದ್ದ ಪ್ರತಾಪ್(28) ಹಾಗೂ ಕೊಂಗಳ್ಳಯ್ಯ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದು, ಮಂಡ್ಯ ಜಿಲ್ಲೆಯ ಅಭಿ ಎಂಬಾತ ತೀವ್ರವಾಗಿ ಗಾಯಗೊಂಡಿದ್ದು, ಆತನನ್ನು ಸಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಇಂದು ಬೆಳಗಿನ ಜಾವ ಈ ಅಪಘಾತ ಸಂಭವಿಸಿದ್ದು, ಕೊಡಸೋಗೆ ಸಮೀಪದ ರಸ್ತೆ ಬದಿಯಲ್ಲಿದ್ದ ಲೈಟ್ ಕಂಬಕ್ಕೆ ಕಾರು ಡಿಕ್ಕಿಯಾಗಿದೆ.
ಡಿಕ್ಕಿ ರಭಸಕ್ಕೆ ವಿದ್ಯುತ್ ಕಂಬ ಕಾರಿನ ಮೇಲೆ ಮುರಿದು ಬಿದ್ದಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೆರಕಣಾಂಬಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಲಾಗಿದೆ. ತೆರಕಣಾಂಬಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.






