1.20 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

Views: 85
ಕನ್ನಡ ಕರಾವಳಿ ಸುದ್ದಿ: ಗುತ್ತಿಗೆದಾರನೊಬ್ಬನಿಂದ 1.20 ಲಕ್ಷ ಲಂಚ ಪಡೆಯುತ್ತಿದ್ದ ಇಬ್ಬರು ಅಧಿಕಾರಿಗಳು ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಭದ್ರಾ ಅಣೆಕಟ್ಟೆಯ ಗೊಂದಿ ಬಲದಂಡೆ ನಾಲೆಯ ಸಿಲ್ಟ್ ತೆಗೆಯುವ ಕಾಮಗಾರಿಯ ಟೆಂಡರ್ ತಮಗೆ ಲಭಿಸಿದ್ದು, ಕಾಮಗಾರಿ 2024ರ ಜನವರಿಯಲ್ಲಿ ಪೂರ್ಣಗೊಂಡಿತ್ತು. ಆದರೆ, ಟೆಂಡರ್ ಹಣ 9,36,999ಲಕ್ಷ ರೂ. ಗುತ್ತಿಗೆದಾರರಿಗೆ ಮಂಜೂರಾಗಿರಲಿಲ್ಲ. ಹಾಗಾಗಿ, ಮಂಜೂರಾತಿಗಾಗಿ ಹಲವು ಬಾರಿ ಮನವಿ ಮಾಡಿದ್ದೆ.
ಕಳೆದ ಡಿ.27ರಂದು ನೀರಾವರಿ ನಿಗಮದ ಸೆಕ್ಷನ್ ಆಫೀಸರ್ ಕೊಟ್ರಪ್ಪ ಬಿಲ್ ಮಂಜೂರಾಗಬೇಕಿದ್ದರೆ 1.20 ಲಕ್ಷ ರೂ. ಹಣ ನೀಡುವಂತೆ ಬೇಡಿಕೆಯಿಟ್ಟಿದ್ದರು ಎಂದು ಬಳ್ಳಾರಿಯ ಗುತ್ತಿಗೆದಾರ ರವಿ ಎಂಬವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಈ ದೂರಿನನ್ವಯ ನಿನ್ನೆ ಕೊಟ್ರಪ್ಪ ಅವರ ಕಚೇರಿಯ ಲೈಟ್ ಮಜದೂರ್ ಅರವಿಂದ್ ಎಂಬವರಿಂದ 1.20 ಲಕ್ಷ ರೂ. ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಣದ ಜೊತೆಗೆ ಕೊಟ್ರಪ್ಪ ಹಾಗೂ ಅರವಿಂದ್ ಎಂಬಿಬ್ಬರನ್ನು ಬಂಧಿಸಿದ್ದಾರೆ.
ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ವೀರಭದ್ರಪ್ಪ ಕುಸಲಾಪುರ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.






