ಆರ್ಥಿಕ

DCC ಬ್ಯಾಂಕ್‌ನಲ್ಲಿ ಕಿರಿಯ ಸಹಾಯಕರ ನೇಮಕಾತಿ: ಅರ್ಜಿ ಆಹ್ವಾನ

Views: 391

ಕನ್ನಡ ಕರಾವಳಿ ಸುದ್ದಿ: ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಡಿಸಿಸಿ)ನಲ್ಲಿ ಖಾಲಿ ಇರುವ ಗ್ರೂಪ್ ಸಿ ವೃಂದದ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 32 ಕಿರಿಯ ಸಹಾಯಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆ ವಿವರ: ಒಟ್ಟು 32 ಕಿರಿಯ ಸಹಾಯಕರ ಹುದ್ದೆ.

ವಿದ್ಯಾರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು. ಕನಿಷ್ಠ 6 ತಿಂಗಳ ಕಂಪ್ಯೂಟರ್ ತರಬೇತಿ ಕೋರ್ಸ್ ಮಾಡಿರಬೇಕು.

ವಯೋಮಿತಿ: ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ಆಗಿದ್ದು, ಗರಿಷ್ಠ ವಯೋಮಿತಿ 35 ವರ್ಷವಾಗಿದೆ. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ವರ್ಗದ ಅಭ್ಯರ್ಥಿಗಳಿಗೆ 3 ಮತ್ತು ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷದ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ವೇತನ: 30,350 – 58,250 ರೂ ಮಾಸಿಕ.

ಈ ಹುದ್ದೆಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಸಲಾಗುವುದು.

ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಸಾಮಾನ್ಯ ಮತ್ತು ಹಿಂದುಳಿದ ಅಭ್ಯರ್ಥಿಗಳಿಗೆ 1750 ರೂ ಹಾಗೂ ಪ.ಜಾ, ಪ.ಪಂ, ಪ್ರವರ್ಗ 1, ಮಹಿಳೆಯರು ಮತ್ತು ಅಂಗವಿಕಲರಿಗೆ 1250 ರೂ ಅರ್ಜಿ ನಿಗದಿಸಲಾಗಿದೆ.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜನವರಿ 16 

ಈ ಹುದ್ದೆ ಕುರಿತ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು kodagudccbank.com ಇಲ್ಲಿಗೆ ಭೇಟಿ ನೀಡಿ.

Related Articles

Back to top button