ಶಿಕ್ಷಣ

ಮದರ್ ತೆರೇಸಾ ಶಿಕ್ಷಣ ಸಂಸ್ಥೆ:ರಸಪ್ರಶ್ನೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Views: 8

ಶಂಕರನಾರಾಯಣ :ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ ಮತ್ತು ಜಿಲ್ಲಾಡಳಿತ ಜಿಲ್ಲಾಪಂಚಾಯತ್ ಉಡುಪಿ ಜಿಲ್ಲೆ, ಉಪನಿರ್ದೇಶಕರ ಕಛೇರಿ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬ್ರಹ್ಮಾವರ, ಹಾಗೂ ದುರ್ಗಾ ಆಂಗ್ಲಮಾಧ್ಯಮ ಶಾಲೆ ಕೊಕ್ಕರ್ಣೆ ಇವರ ಸಹಭಾಗಿತ್ವದಲ್ಲಿ ನಡೆದ 2024-25 ನೇ ಶೈಕ್ಷಣಿಕ ಸಾಲಿನ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಮದರ್ ತೆರೇಸಾ ಶಿಕ್ಷಣ ಸಂಸ್ಥೆ, ಶಂಕರನಾರಾಯಣ ಇಲ್ಲಿನ ಹೆಮ್ಮೆಯ ಪ್ರತಿಭೆಗಳಾದ ಕುಮಾರ ಪ್ರೀತಮ್ ಮತ್ತು ಕುಮಾರ ಆದಿತ್ಯ ಬಿ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಮುಖ್ಯ ಶಿಕ್ಷಕರು, ಬೋಧಕ ಮತ್ತು ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಸಂಸ್ಥೆಯ ಪರವಾಗಿ ಪ್ರೀತಿಪೂರ್ವಕ ಅಭಿನಂದನೆಗಳು.

 

Related Articles

Back to top button
error: Content is protected !!