ಇತರೆ
ಕುಂದಾಪುರ: ರೈಲು ಪ್ರಯಾಣಿಕ ಹೃದಯಘಾತದಿಂದ ಸಾವು

Views: 117
ಕನ್ನಡ ಕರಾವಳಿ ಸುದ್ದಿ: ಕೇರಳ ಮೂಲದ ವ್ಯಕ್ತಿಯೊಬ್ಬರಿಗೆ ಎದೆ ನೋವು ಕಾಣಿಸಿಕೊಂಡು ಹೃದಯಘಾತದಿಂದ ಸಾವನಪ್ಪಿದ ಘಟನೆ ಕುಂದಾಪುರ ಮೂಡ್ಲಕಟ್ಟೆಯ ರೈಲು ನಿಲ್ದಾಣದ ಸಮೀಪ ಸಂಭವಿಸಿದೆ.
ಕೇರಳದ ಕೊಲ್ಲಂ ಜಿಲ್ಲೆಯ ಸೆಬಾಸ್ಟಿನ್(52) ಮೃತಪಟ್ಟವರು.
ಅಯೋಧ್ಯೆ, ಕಾಶಿ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಿ ಮಂಗಳ ಎಕ್ಸ್ಪ್ರೆಸ್ ರೈಲಿನಲ್ಲಿ ಬರುತ್ತಿದ್ದಾಗ ಸೆಬಾಸ್ಟಿನ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ರೈಲ್ವೆ ಸಿಬ್ಬಂದಿಗೆ ತಿಳಿಸಿ ಅವರು ಮುಂದಿನ ನಿಲ್ದಾಣ ಕುಂದಾಪುರ ಮೂಡ್ಲಕಟ್ಟೆಯಲ್ಲಿ ಇಳಿಸಿ ಆಸ್ಪತ್ರೆಗೆ ದಾಖಲಿಸಲು ವ್ಯವಸ್ಥೆ ಮಾಡಿದ್ದಾರೆ. ಕುಂದಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯರು ಸೆಬಾಸ್ಟಿನ್ ಅದಾಗಲೇ ಮೃತಪಟ್ಟಿದ್ದರು ಎಂದು ತಿಳಿಸಿದರು. ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






