ಇತರೆ

ಉಡುಪಿ-ಚಿಕ್ಕಮಗಳೂರು ವಿಭಾಗದ ಮೋಸ್ಟ್  ವಾಂಟೆಡ್ ನಕ್ಸಲರು ಶರಣಾಗತಿಗೆ ನಿರ್ಧಾರ!

Views: 103

ಕನ್ನಡ ಕರಾವಳಿ ಸುದ್ದಿ: ಕಳೆದ ಕೆಲವು ದಿನಗಳ ಹಿಂದೆ ಚಿಕ್ಕಮಗಳೂರು ಭಾಗದಲ್ಲಿ ನಕ್ಷಲ್ ಚಟುವಟಿಕೆ ಹೆಚ್ಚಾಗಿದ್ದು, ಈ ವೇಳೆ ವಿಕ್ರಂ ಗೌಡನನ್ನು ಎನ್ಕೌಂಟರ್ ಮಾಡಿದ ಬಳಿಕ ಇದೀಗ 6 ನಕ್ಸಲರು ಚಿಕ್ಕಮಂಗಳೂರು ಜಿಲ್ಲಾಡಳಿತದ ಮುಂದೆ ಶರಣಾಗತಿಗೆ ನಿರ್ಧರಿಸಿದ್ದು, ಮುಂದಿನ ಮೂರು ದಿನಗಳಲ್ಲಿ ಆರು ನಕ್ಸಲರು ಶರಣಾಗೋ ಸಾಧ್ಯತೆ ಇದೆ ಎನ್ನಲಾಗಿದೆ.

ಚಿಕ್ಕಮಗಳೂರಿನ ಜಿಲ್ಲಾಡಳಿತದ ಮುಂದೆ ಶರಣಾಗತಿ ಆಗಲು ನಿರ್ಧಾರ ಮಾಡಿದ್ದಾರೆ. ಕರ್ನಾಟಕ, ಕೇರಳ, ಆಂಧ್ರಕ್ಕೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ನಕ್ಸಲರು ಇದೀಗ ಶರಣಾಗತಿಗೆ ನಿರ್ಧಾರ ಮಾಡಿದ್ದಾರೆ. ಕರ್ನಾಟಕದ ನಕ್ಸಲ್ ತುಂಗಾ ದಳದ ನಕ್ಸಲ್ ನಾಯಕಿ ಮುಂಡಗಾರು ಲತಾ, ಸುಂದರಿ, ವನಜಾಕ್ಷಿ, ದಕ್ಷಿಣ ಭಾರತದ ಮೋಸ್ಟ ವಾಂಟೆಡ್ ನಕ್ಸಲ್ ಜೀಶ ಆಂಧ್ರಪ್ರದೇಶದ ಕೆ. ವಸಂತ್, ಮಾರಪ್ಪ ಅರೋಲಿ ಶರಣಾಗತಿಗೆ ನಿರ್ಧರಿಸಿದ್ದಾರೆ.

ಈ ಬಗ್ಗೆ ಶಾಂತಿಗಾಗಿ ನಕ್ಸಲರು ನಾಗರೀಕ ವೇದಿಕೆಗೆ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ವೇದಿಕೆ ಸದಸ್ಯರು ಚರ್ಚಿಸಿದ್ದಾರೆ. ಮೂರು ದಿನಗಳಲ್ಲಿ ಆರು ನಕ್ಸಲರು ಶರಣಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮೂರು ತಿಂಗಳಿನಿಂದ ಚಿಕ್ಕಮಂಗಳೂರು ಉಡುಪಿ ಭಾಗದಲ್ಲಿ ನಕ್ಸಲ್ ಚಟುವಟಿಕೆ ನಡೆಯುತ್ತಿತ್ತು. ವಿಕ್ರಂ ಎನ್ಕೌಂಟರ್ ಬಳಿಕ ಸರ್ಕಾರ ನಕ್ಸಲರಿಗೆ ಶರಣಾಗತಿಗೆ ಆದ್ಯತೆ ನೀಡಿತ್ತು. ಹಾಗಾಗಿ ಇದೀಗ 6 ನಕ್ಸಲರು ತಾವಾಗಿಯೇ ಶರಣಾಗತಿಗೆ ನಿರ್ಧಾರ ಕೈಗೊಂಡಿದ್ದಾರೆ

Related Articles

Back to top button
error: Content is protected !!