ಇತರೆ

ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದಿದ್ದ ಓರ್ವ ಆರೋಪಿ ಅರೆಸ್ಟ್

Views: 397

ಕನ್ನಡ ಕರಾವಳಿ ಸುದ್ದಿ: ಬೆಂಗಳೂರಿನಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ದ ಕ್ರೌರ್ಯ ಮೆರೆದಿದ್ದ ಆರೋಪಿಯನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ.

ಸೈಯದ್ ನಸ್ರು (30) ಬಂಧಿತ ಆರೋಪಿ. ಬಿಹಾರದ ಚಂಪಾರಣ್ ಮೂಲದ ಸೈಯದ್ ನಸ್ರು ಈ ಕೃತ್ಯವೆಸಗಿದ್ದಾನೆ ಎಂದು ತಿಳಿದುಬಂದಿದೆ. ಕೃತ್ಯ ನಡೆದ 50 ಮೀಟರ್ ದೂರದಲ್ಲಿ ಪ್ಲಾಸ್ಟಿಕ್, ಬಟ್ಟೆ ಹೊಲೆಯುವ ಅಂಗಡಿಯಲ್ಲಿ ಕೆಲಸ ಮಡುತ್ತಿದ್ದ.

ಕುಡಿದ ಅಮಲಿನಲ್ಲಿ ಆರೋಪಿ ಹಸುಗಳ ಕೆಚ್ಚಲು ಕೊಯ್ದಿದ್ದಾನೆ ಎಂದು ತಿಳಿದುಬಂದಿದೆ. ಸದ್ಯ ಆರೋಪಿಯನ್ನು ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಜನವರಿ 24ರವರೆಗೆ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Related Articles

Back to top button
error: Content is protected !!