ಇತರೆ
ಕುಂದಾಪುರ: ಕುಂಭಾಸಿಯಲ್ಲಿ ಡಿವೈಡರ್ ಹಾರಿ ಟೆಂಪೋಗೆ ಡಿಕ್ಕಿ ಹೊಡೆದ ಕಾರು; ಚಾಲಕರಿಗೆ ಗಂಭೀರ

Views: 192
ಕನ್ನಡ ಕರಾವಳಿ ಸುದ್ದಿ: ಕಾರೊಂದು ಡಿವೈಡರ್ ಹಾರಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟೆಂಪೋಗೆ ಡಿಕ್ಕಿ ಹೊಡೆದು ಎರಡು ವಾಹನ ಚಾಲಕರು ಗಂಭೀರ ಗಾಯಗೊಂಡ ಘಟನೆ ಭಾನುವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 66 ರ ಕುಂಭಾಸಿಯ ಏಕದಂತ ಸರ್ವೀಸ್ ಸ್ಟೇಷನ್ ಬಳಿ ಸಂಭವಿಸಿದೆ.
ಬ್ರಹ್ಮಾವರದಿಂದ ಕುಂದಾಪುರ ಕಡೆ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಬಂದು ಕುಂದಾಪುರದಿಂದ ಉಡುಪಿ ಕಡೆ ಹೋಗುತ್ತಿದ್ದ ಐಸ್ ಕ್ರೀಮ್ ಸಾಗಾಟದ ಟೆಂಪೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎರಡು ವಾಹನಗಳು ಜಖಂ ಗೊಂಡಿದ್ದು, ಇಬ್ಬರು ಚಾಲಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದಾರೆ. ಕುಂದಾಪುರ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ಮಾಡಿದ್ದಾರೆ.






