ಆರೋಗ್ಯ

ಬಿಪಿಎಲ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್..! ಜಿಲ್ಲಾ ಆಸ್ಪತ್ರೆಗಳಲ್ಲಿ ‘MRI, ಸಿಟಿ ಸ್ಕ್ಯಾನ್’ ಫ್ರೀ

Views: 238

ಕನ್ನಡ ಕರಾವಳಿ ಸುದ್ದಿ: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಇದೀಗ ಸರ್ಕಾರ ಸಿಹಿ ಸುದ್ದಿ ಒಂದನ್ನು ನೀಡಿದ್ದು, ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಬಿಪಿಎಲ್ ಕಾರ್ಡ್ ಗಳನ್ನು ಹೊಂದಿದಂತಹ ಫಲಾನುಭವಿಗಳಿಗೆ  ‘MRI, ಸಿಟಿ ಸ್ಕ್ಯಾನ್’ ಸೇವೆಯನ್ನು ಉಚಿತವಾಗಿ ಪಡೆದುಕೊಳ್ಳಬಹುದು.

ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಒಂದು ನಿರ್ಧಾರ ಕೈಗೊಂಡಿದ್ದು, ಬಡವರು ಈ ಸೇವೆಗೆ ದುಬಾರಿ ವೆಚ್ಚ ಭರಿಸಬೇಕಿತ್ತು. ಹೀಗಾಗಿ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ಒದಗಿಸಲಾಗುತ್ತಿರುವ  ಆಸ್ಪತ್ರೆಗಳಲ್ಲಿ ‘MRI, ಸಿಟಿ ಸ್ಕ್ಯಾನ್’ ಗಳನ್ನು ಉಚಿತವಾಗಿ ನೀಡಲು ನಿರ್ಣಯಿಸಲಾಗಿದೆ.

ರೋಗಿಗಳು ಅನಗತ್ಯವಾಗಿ ಸ್ಕ್ಯಾನ್ ಗೆ ಒಳಪಡುವುದನ್ನು ತಪ್ಪಿಸಲು, ಯೋಜನೆ ನಿಜವಾದ ಫಲಾನುಭವಿಯನ್ನು ತಲುಪುವುದನ್ನು ಖಚಿತಪಡಿಸಲು ಪಿಹೆಚ್ಹೆಚ್ ಫಲಾನುಭವಿಗಳಿಗೆ ಉಚಿತವಾಗಿ ಹಾಗೂ ಇತರರಿಗೆ ಶೇ.70 ವಿಧಿಸಲು ನಿರ್ಣಯ ಕೈಗೊಳ್ಳಲಾಗಿದೆ. ಹಾಗಾಗಿ ಬಿಪಿಎಲ್ ಕಾರ್ಡ್ಗಳನ್ನು ಹೊಂದಿದ ಫಲಾನುಭವಿಗಳು ಇನ್ಮುಂದೆ ಜಿಲ್ಲಾ ಆಸ್ಪತ್ರೆಗಳಲ್ಲಿ ಉಚಿತವಾಗಿ ಎಂ ಆರ್ ಐ ಹಾಗೂ ಸಿಟಿ ಸ್ಕ್ಯಾನ್ ಸೇವೆಗಳನ್ನು ಪಡೆದುಕೊಳ್ಳಬಹುದಾಗಿದೆ.

Related Articles

Back to top button