ಇತರೆ
ಪರ್ಕಳದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ, ಓರ್ವನ ಬಂಧನ, ಮಹಿಳೆಯ ರಕ್ಷಣೆ

Views: 225
ಕನ್ನಡ ಕರಾವಳಿ ಸುದ್ದಿ: ಪರ್ಕಳದ ಲಾಡ್ಜ್‌ನಲ್ಲಿ ಬಲವಂತವಾಗಿ ಮಹಿಳೆಯರನ್ನು ಇರಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ ಆರೋಪಿ ಶರಣಪ್ಪನನ್ನು ಬಂಧಿಸಿದ್ದಾರೆ. ಒರ್ವ ಮಹಿಳೆಯನ್ನು ರಕ್ಷಿಸಲಾಗಿದೆ.
ಪರ್ಕಳದ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಲಾಡ್ಜ್ವೊಂದರಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ಮಣಿಪಾಲ ಪೊಲೀಸರ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.