ಕರಾವಳಿ

ಉಡುಪಿಯಲ್ಲಿ 5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಯನ್ನು ಕೂಡಲೇ ಪತ್ತೆ ಹಚ್ಚಿ, ಹೆಬ್ಬಾಳಕರ್ ಸೂಚನೆ

Views: 189

ಕನ್ನಡ ಕರಾವಳಿ ಸುದ್ದಿ, ಬೆಳಗಾವಿ : ಉಡುಪಿಯಲ್ಲಿ 5 ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಕುರಿತು ತ್ವರಿತ ಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದ್ದಾರೆ.

ಅಪಘಾತದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಘಟನೆಯ ಮಾಹಿತಿ ಬಂದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಘಟನೆಯ ವಿವರ ಪಡೆದರು.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಯನ್ನು ತಕ್ಷಣ ಪತ್ತೆ ಹಚ್ಚಬೇಕು. ಜೊತೆಗೆ, ಬಾಲಕಿಗೆ ಅಗತ್ಯವಾದ ಎಲ್ಲ ನೆರವನ್ನು ನೀಡಬೇಕು ಎಂದು ಸಚಿವರು ಜಿಲ್ಲಾಧಿಕಾರಿ ಹಾಗೂ ಎಸ್ಪಿಗೆ ಸೂಚನೆ ನೀಡಿದರು.

Related Articles

Back to top button
error: Content is protected !!