ಇತರೆ

ಶಾಲಾ ವಿದ್ಯಾರ್ಥಿನಿಯೊಂದಿಗೆ ಮೆಡಿಕಲ್ ಶಾಪ್ ಮಾಲೀಕನ ರಾಸಲೀಲೆ!

Views: 228

ಕನ್ನಡ ಕರಾವಳಿ ಸುದ್ದಿ : ಶಾಲಾ ವಿದ್ಯಾರ್ಥಿನಿಯೊಂದಿಗೆ ಮೆಡಿಕಲ್ ಶಾಪ್ ಮಾಲೀಕನೊಬ್ಬ ನಡೆಸಿದ ರಾಸಲೀಲೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.

ದಾವಣಗೆರೆಯ ಚೆನ್ನಗಿರಿಯಲ್ಲಿ ದೇವರಾಜ್ ಅರಸ್ ಲೇ ಔಟ್ ನ ಮೆಡಿಕಲ್ ಶಾಪ್ ನಡೆಸುತ್ತಿದ್ದ ಮಾಲೀಕ ಶಾಲಾ ವಿದ್ಯಾರ್ಥಿನಿಯೊಂದಿಗೆ ರಾಸಲೀಲೆ ನಡೆಸುವ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಈತ ಚನ್ನಗಿರಿ ಬಸ್ ನಿಲ್ದಾಣ ಸಮೀಪ ಅಮರ್ ಮೆಡಿಕಲ್ ಶಾಪ್ ಅನ್ನು ಕಳೆದ ಕೆಲ ವರ್ಷಗಳಿಂದ ನಡೆಸುತ್ತಿದ್ದ. ಇಲ್ಲಿಗೆ ಬರುತ್ತಿದ್ದ ಶಾಲಾ ವಿದ್ಯಾರ್ಥಿನಿಯರು, ಯುವತಿಯರನ್ನು ಟಾರ್ಗೆಟ್ ಮಾಡುತ್ತಿದ್ದ ಎನ್ನಲಾಗಿದೆ. ಈತ ಶಾಲಾ ಸಮವಸ್ತ್ರದಲ್ಲಿದ್ದ ವಿದ್ಯಾರ್ಥಿನಿ ಜೊತೆ ರಾಸಲೀಲೆ ನಡೆಸಿರುವ ವಿಡಿಯೋ ರೆಕಾರ್ಡ್ ಮಾಡಿಕೊಂಡು ಸ್ನೇಹಿತರಿಗೆ ಕಳುಹಿಸಿದ್ದ ಎನ್ನಲಾಗಿದೆ. ಈ ವಿಡಿಯೋ ಚನ್ನಗಿರಿ ತಾಲೂಕಿನ ಹಲವಡೆ ವೈರಲ್ ಆಗಿತ್ತು.

ಅಮ್ಜದ್ ನಡೆಸಿದ್ದ ಕೃತ್ಯಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಆರೋಪಿಯೇ ವಿಡಿಯೋ ವೈರಲ್ ಮಾಡಿದ್ದ ಎನ್ನಲಾಗಿದೆ. ಇದು ಸ್ಥಳೀಯರನ್ನು ಕೆರಳುವಂತೆ ಮಾಡಿತ್ತು. ಆದ್ರೆ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟುವ ಮೂಲಕ ಚಾಕಚಕ್ಯತೆ ತೋರಿದ್ದಾರೆ. ಪೊಲೀಸರು ಸುಮೋಟೋ ಕೇಸ್ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.

Related Articles

Back to top button
error: Content is protected !!