ಸಾಂಸ್ಕೃತಿಕ

ನಕ್ಸಲ್ ಲಕ್ಷ್ಮೀ ತೊಂಬಟ್ಟು 3 ಪ್ರಕರಣಗಳ ತನಿಖೆಗೆ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ

Views: 72

ಕನ್ನಡ ಕರಾವಳಿ ಸುದ್ದಿ: ಇತ್ತೀಚೆಗೆ ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟು ಅವರನ್ನು ಕುಂದಾಪುರ ಪೊಲೀಸ್ ಉಪವಿಭಾಗದ ಮೂರು ಪ್ರಕರಣಗಳಿಗೆ ಸಂಬಂಧಿಸಿ ಪೊಲೀಸರು ಕಸ್ಟಡಿಗೆ ಪಡೆದುಕೊಳ್ಳಲಾಗಿದೆ.

ನ್ಯಾಯಾಂಗ ಬಂಧನದಲ್ಲಿದ್ದ ಲಕ್ಷ್ಮೀ ತೊಂಬಟ್ಟು ಅವರನ್ನು ಪೊಲೀಸರು ಕುಂದಾಪುರದ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಸಲ್ಲಿಸಿದರು. ಅದರಂತೆ ನ್ಯಾಯಾಧೀಶರು ಲಕ್ಷ್ಮಿ ಅವರನ್ನು 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದರು.

ಇದೀಗ ಪೊಲೀಸರು ಲಕ್ಷ್ಮೀ ಅವರನ್ನು ವಶಕ್ಕೆ ಪಡೆದುಕೊಂಡಿದ್ದು ಕುಂದಾಪುರ ಡಿವೈಎಸ್ಪಿ ಎಚ್.ಡಿ ಕುಲಕರ್ಣಿ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಅಂದಿನ ಅಮಾಸೆಬೈಲು ಠಾಣೆ ವ್ಯಾಪ್ತಿಗೊಳಪಡುವ 3 ಪ್ರಕರಣಗಳಲ್ಲಿ ಲಕ್ಷ್ಮೀ ವಿಚಾರಣೆ, ತನಿಖೆ ನಡೆಯಲಿದೆ.

ನಕ್ಸಲ್ ಸಂಬಂಧಿತ ಚಟುವಟಿಕೆಗಳು ಭಿತ್ತಿಪತ್ರ, ಕರಪತ್ರ ಹಾಗೂ ಪ್ರಕರಣವೊಂದರಲ್ಲಿ ಕೂಂಬಿಂಗ್ ವೇಳೆ ಪೊಲೀಸರ ಮೇಲೆ ದಾಳಿ, ಕೊಲೆ ಯತ್ನ ಪ್ರಕರಣಗಳಲ್ಲಿ ಲಕ್ಷ್ಮೀ ಆರೋಪಿಯಾಗಿದ್ದಾರೆ.

Related Articles

Back to top button