ಶೀಘ್ರದಲ್ಲೇ ಮಹಿಳೆಯರ ಖಾತೆಗೆ ಗೃಹ ಲಕ್ಷ್ಮೀ ಹಣ: ಲಕ್ಷ್ಮೀ ಹೆಬ್ಬಾಳ್ಕರ್

Views: 75
ಕನ್ನಡ ಕರಾವಳಿ ಸುದ್ದಿ: ಹಣ ಫಲಾನುಭವಿಗಳ ಖಾತೆಗೆ ಶೀಘ್ರದಲ್ಲೇ ಜಮೆಯಾಗಲಿದೆಯೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಖಚಿತಪಡಿಸಿದ್ದಾರೆ.
ತಾಲೂಕು ಪಂಚಾಯತಿಗಳಿಗೆ ಹಣ ತಲುಪಿದ್ದು, ಅಲ್ಲಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ರವಾನೆಯಾಗುವುದು ವಿಳಂಬವಾಗಿದೆ. ಹೀಗಾಗಿ ಗೃಹ ಲಕ್ಷ್ಮೀಯರ ಖಾತೆಗೆ ಹಣ ಜಮೆ ಆಗುವುದು ತಡವಾಗಿದೆ ಎಂದಿದ್ದಾರೆ.
ಬೆಳಗಾವಿ ನಗರದ ಗೃಹ ಕಚೇರಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಈ ಮೊದಲಿನಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರ ಮೂಲಕವೇ ಗೃಹ ಲಕ್ಷ್ಮೀ ಯೋಜನೆ ಹಣ ಫಲಾನುಭವಿಗಳ ಖಾತೆಗೆ ಜಮೆ ಆಗಲಿದೆ. ಈಗಾಗಲೇ ತಾಲೂಕು ಪಂಚಾಯಿತಿ ಖಾತೆಗಳಿಗೆ ಗೃಹ ಲಕ್ಷ್ಮೀ ಹಣ ರಾಜ್ಯ ಸರಕಾರದಿಂದ ಜಮೆ ಆಗಿದೆ. ಅಲ್ಲಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ರವಾನೆಯಾಗುವುದು ವಿಳಂಬವಾಗಿದೆ. ಹೀಗಾಗಿ ಗೃಹ ಲಕ್ಷ್ಮೀಯರ ಖಾತೆಗೆ ಹಣ ಜಮೆ ಆಗುವುದು ತಡವಾಗಿದೆ. ತಾಲೂಕು ಪಂಚಾಯತ್‌ಗಳಿಂದ ಹಣ ವರ್ಗಾವಣೆಗೆ ಕ್ರಮ ವಹಿಸಲಾಗಿದ್ದು, ಶೀಘ್ರವಾಗಿ ಉಪ ನಿರ್ದೇಶಕರ ಮೂಲಕ ಹಣ ಪಾವತಿಗೆ ಕ್ರಮ ಕೈಗೊಳ್ಳಲಾಗಿದೆ,” ಎಂದು ತಿಳಿಸಿದರು.