ಶಿಕ್ಷಣ
ಇಂದಿನಿಂದ ಶಾಲಾ ಪ್ರಾರಂಭೋತ್ಸವ : ಮೇ. 31 ರಿಂದ ತರಗತಿ ಆರಂಭ

Views: 0
ಕುಂದಾಪುರ : ಮೇ 29 ಮತ್ತು 30 ರಂದು ಶಾಲೆಗಳನ್ನು ಸ್ವಚ್ಛ ಗೊಳಿಸಿ ಪ್ರಾರಂಭೋತ್ಸವಕ್ಕೆ ಸಕಲ ಸಿದ್ಧತೆ ನಡೆಸಿ ಮೇ 31 ರಂದು ರಾಜ್ಯಾದ್ಯಂತ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಪುನಾರಂಭಗೊಳ್ಳಲಿದೆ.
ಮಕ್ಕಳು ಶಾಲೆಯಲ್ಲಿ ಕುಳಿತುಕೊಂಡು ಪಾಠ ಕೇಳಲು ಆರೋಗ್ಯಕರ ರೀತಿಯಲ್ಲಿ ಶಾಲೆಯನ್ನು ಸ್ವಚ್ಛಗೊಳಿಸಬೇಕು, ಪ್ರತಿ ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸಭೆ ನಡೆಸಿ ಪ್ರಾರಂಭೋತ್ಸವ ಹೇಗೆ ಮಾಡಬೇಕು, ಶಾಲಾ ವೇಳಾಪಟ್ಟಿ, ಶಾಲಾಭಿವೃದ್ಧಿ ಯೋಜನೆ, ಶಾಲಾ ವಾಷಿ೯ಕ ಕ್ಯಾಲೆಂಡರ್ ಸಿದ್ಧಪಡಿಸಬೇಕು ಎಂದು ಶಿಕ್ಷಣ ಇಲಾಖೆಯಿಂದ ಸೂಚಿಸಲಾಗಿದೆ.
ಕಳೆದ ಸಾಲಿನಲ್ಲಿ ಅಧ೯ಕ್ಕೆ ಶಿಕ್ಷಣ ಮೊಟಕುಗೊಳಿಸಿರುವ, ಶಾಲೆಗೆ ಬಾರದ ವಿದ್ಯಾರ್ಥಿಗಳನ್ನು ಮರಳಿ ಶಾಲೆಗೆ ಕರೆತರಲು ಶಾಲೆಯ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಇಲಾಖೆ ಸುತ್ತೋಲೆ ಹೊರಡಿಸಿದೆ.