ರಾಜಕೀಯ
ದೆಹಲಿಯ 4ನೇ ಮಹಿಳಾ ಸಿಎಂ ಆಗಿ ರೇಖಾ ಗುಪ್ತಾ ಆಯ್ಕೆ

Views: 72
ಕನ್ನಡ ಕರಾವಳಿ ಸುದ್ದಿ: ರಾಷ್ಟ್ರ ರಾಜಧಾನಿ ದೆಹಲಿ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ಘೋಷಿಸಿದೆ.
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 27 ವರ್ಷಗಳ ಬಳಿಕ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿದಿದ್ದು, ರೇಖಾ ಗುಪ್ತಾ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿದೆ. ರೇಖಾ ಗುಪ್ತಾ ಶಾಲಿಮಾರ್ ಬಾಗ್ ಶಾಸಕಿಯಾಗಿದ್ದು, ಬಿಜೆಪಿಯ ಮಹಿಳಾ ವಿಭಾಗದ ಉಪಾಧ್ಯಕ್ಷೆಯೂ ಆಗಿದ್ದಾರೆ. ಈ ಮೂಲಕ ದೆಹಲಿಯ 4ನೇ ಮಹಿಳಾ ಸಿಎಂ ಆಗಿ ರೇಖಾ ಗುಪ್ತಾ ಅಧಿಕಾರ ಸ್ವೀಕರಿಸಲಿದ್ದಾರೆ.
ಇಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ರೇಖಾ ಗುಪ್ತಾ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.