ಇತರೆ

ಮನೆ ಮುಂದೆ ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಜೆಸಿಬಿ ಹರಿದು ಸಾವು

Views: 135

ಕನ್ನಡ ಕರಾವಳಿ ಸುದ್ದಿ: ಮನೆ ಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ ಜೆಸಿಬಿ ಹರಿದ ಪರಿಣಾಮ ಮಗು ಮೃತಪಟ್ಟ ಘಟನೆ ಬೆಂಗಳೂರಿನ ಕಾಡುಗೋಡಿ ನಡೆದಿದೆ.

ಮೃತಪಟ್ಟ ಮಗು ಥವನ್ ರೆಡ್ಡಿ (2) ಸಂಜೆ ವೇಳೆಗೆ ಮಗು ಮನೆಯ ಎದುರುಗಡೆ ಇರುವ ರಸ್ತೆಯಲ್ಲಿ ಆಟವಾಡುತ್ತಿತ್ತು. ಇದೇ ವೇಳೆ ವೇಗವಾಗಿ ಬಂದ ಜೆಸಿಬಿ ಮಗುವಿನ ತಲೆಯ ಮೇಲೆ ಹರಿದು ಹೋಗಿದೆ.

ಆ ಕೂಡಲೇ ಗಾಯಗೊಂಡ ಮಗುವನ್ನು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗೆ ರವಾನೆ ಮಾಡಲಾಗಿತ್ತು. ಪರೀಕ್ಷೆ ನಡೆಸಿದ ವೈದ್ಯರು ಮಾರ್ಗ ಮಧ್ಯದಲ್ಲಿ ಮಗು ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಘಟನೆ ಸಂಬಂಧ ಮಹಾದೇವಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!