ಸಾಮಾಜಿಕ

ಮದುವೆಯಾಗಲು ಕನ್ಯೆ ಸಿಗದಿದ್ದಕ್ಕೆ ನೊಂದು ಯುವಕ ನೇಣಿಗೆ ಶರಣು!

Views: 132

ಕನ್ನಡ ಕರಾವಳಿ ಸುದ್ದಿ: ಹಾವೇರಿ ತಾಲೂಕಿನ ಕಳ್ಳಿಹಾಳ ಗ್ರಾಮದಲ್ಲಿ ಮದುವೆಗೆ ಕನ್ಯೆ ಸಿಗದ ಕಾರಣಕ್ಕೆ 35 ವರ್ಷದ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕಳ್ಳಿಹಾಳ ಗ್ರಾಮದಲ್ಲಿ ನಡೆದಿದೆ.

ಕಳೆದ 10-12 ವರ್ಷಗಳಿಂದ ಕನ್ಯೆ ಹುಡುಕುತ್ತಿದ್ದರೂ ಸಿಗದ ಕಾರಣ ಖಿನ್ನತೆಗೆ ಒಳಗಾಗಿದ್ದರು.

ಪ್ರಕಾಶ ಬಸವರಾಜ ಹೂಗಾರ (35) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.ಗ್ರಾಮದಲ್ಲಿ ವ್ಯವಸಾಯ ಮಾಡಿಕೊಂಡಿದ್ದ ಇವರು ಕಳೆದ 10- 12 ವರ್ಷಗಳಿಂದ ಮದುವೆಗಾಗಿ ಕನ್ಯೆ ಹುಡುಕುತ್ತಿದ್ದರು. ಆದರೆ, ಇದುವರೆಗೆ ಎಲ್ಲಿಯೂ ಕನ್ಯೆ ಸಿಕ್ಕಿರಲಿಲ್ಲ. ಅದೇ ಚಿಂತೆಯಲ್ಲಿ ಕೊರಗುತ್ತಿದ್ದ. ಮನೆಯ ಬೆಡ್‌ ರೂಂನಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಹಗ್ಗದಿಂದ ಕುತ್ತಿಗೆಗೆ ನೇಣು ಹಾಕಿಕೊಂಡು ಒದ್ದಾಡುತ್ತಿದ್ದ. ತಕ್ಷಣ ಮನೆಯವರು ಜಿಲ್ಲಾಸ್ಪತ್ರೆಗೆ ಕರೆತಂದು ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ ಎಂದು ಈತನ ತಂದೆ ಬಸವರಾಜ ಹೂಗಾರ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ

Related Articles

Back to top button
error: Content is protected !!