ಸಾಂಸ್ಕೃತಿಕ

ಕಾಳಾವರ ಸರ್ಕಾರಿ ಪದವಿ ಕಾಲೇಜಿನಲ್ಲಿ “ಗುರಿ ಮತ್ತು ನಾಯಕತ್ವ”ತರಬೇತಿ

Views: 206

ಕನ್ನಡ ಕರಾವಳಿ ಸುದ್ದಿ: ಕಲಿಯುವ ಪ್ರಕ್ರಿಯೆಯಲ್ಲಿ ಭಯ, ನಾಚಿಕೆ ಹಾಗೂ ತಪ್ಪಿತಸ್ಥ ಭಾವನೆ ಇರಬಾರದು. ತಮಗೆ ಯಾವ ವಿಷಯದ ಬಗೆಗೆ ಜ್ಞಾನ ಬೇಕೋ ಅದರ ಬಗ್ಗೆ ಮಾಹಿತಿ ಸಂಗ್ರಹಿಸಬೇಕು. ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯೊಂದಿಗೆ ಪ್ರಯತ್ನಿಸಿ ನಾಯಕತ್ವದ ಗುಣಗಳನ್ನು ಮೈಗೂಡಿಸಿಕೊಂಡು ಪದವಿ ಶಿಕ್ಷಣದ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಜೇಸಿಐ ಸೆನೆಟರ್ ಸದಾನಂದ ನಾವುಡ ಹೇಳಿದರು.

ಅವರು ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ. ಕಾಲೇಜು ಕೋಟೇಶ್ವರ ಇಲ್ಲಿನ ಐಕ್ಯೂಎಸಿ ಘಟಕ ಮತ್ತು ಕನ್ನಡ ಸಂಘದ ಸಹಯೋಗದೊಂದಿಗೆ ನಡೆದ ಗುರಿ ಮತ್ತು ನಾಯಕತ್ವ ತರಬೇತಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಸಂಘದ ಅಧ್ಯಕ್ಷ ನಾಗರಾಜ ವೈದ್ಯ ಎಂ. ಐಕ್ಯೂಎಸಿ ಸಂಚಾಲಕರಾದ ನಾಗರಾಜ ಯು ಉಪಸ್ಥಿತರಿದ್ದರು.

ಜೇಸಿಐ ಅಧ್ಯಕ್ಷ ಸುಬ್ರಹ್ಮಣ್ಯ ಆಚಾರ್ ನಿರೂಪಿಸಿದರು, ಜೇಸಿ ರಾಕೇಶ್ ಶೆಟ್ಟಿ ವಂದಿಸಿದರು. ನವ್ಯ ಮತ್ತು ತಂಡದವರು ಪ್ರಾರ್ಥಿಸಿದರು.

Related Articles

Back to top button
error: Content is protected !!