ಕರಾವಳಿ

ಉಡುಪಿ-ಮಂಗಳೂರು ನಡುವೆ ಶೀಘ್ರವೇ ಮೆಟ್ರೋ ರೈಲು?

Views: 245

ಕನ್ನಡ ಕರಾವಳಿ ಸುದ್ದಿ: ಮಂಗಳೂರು- ಮಣಿಪಾಲ ಹಾಗೂ ಉಡುಪಿ ನಗರಗಳ ಮಧ್ಯೆ ಇಂಟರ್‌ ಸಿಟಿ ಮೆಟ್ರೋ ರೈಲು ಸಂಪರ್ಕ ಕಾರಿಡಾರ್ ಹಂತ-1ರ ಸರಿ ಸುಮಾರು 60 ಕಿ.ಮೀ. ಉದ್ದದ ಮೆಟ್ರೋ ರೈಲು ಸಂಪರ್ಕ ಕಲ್ಪಿಸಲು ತಾಂತ್ರಿಕ ಹಾಗೂ ಆರ್ಥಿಕ ಸಂಕ್ಷಿಪ್ತ ಟಿಪ್ಪಣಿ ಹಾಗೂ ವಿಸ್ತೃತ ಯೋಜನಾ ವರದಿಯನ್ನು ರೂಪಿಸುವಂತೆ ರಾಜ್ಯ ಸರಕಾರ ಬೆಂಗಳೂರು ಮೆಟ್ರೋ ರೈಲು ನಿಗಮಗೆ ಸೂಚಿಸಿದೆ. ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಜಿಲ್ಲಾಧಿಕಾರಿಗಳಿಗೂ ಪತ್ರ ಬರೆದಿದೆ.

ಇನ್ನು ಮಂಗಳೂರು- ಉಡುಪಿ ನಗರಗಳಲ್ಲಿ ಮೆಟ್ರೋ ರೈಲು ಯೋಜನೆ ಕೈಗೊಳ್ಳುವ ಬಗ್ಗೆ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಮೋಹನ್ ದಾಸ್ ಹೆಗ್ಡೆ ಅವರು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರಿಗೆ ಪತ್ರ ಬರೆದಿದ್ದರು. ಇದೀಗ ಈ ಪ್ರಸ್ತಾವನೆಯ ಬಗ್ಗೆ ಚರ್ಚೆ ಆರಂಭವಾಗಿದ್ದು, ಶೀಘ್ರದಲ್ಲೇ ಮಂಗಳೂರು- ಮಣಿಪಾಲ ಹಾಗೂ ಉಡುಪಿ ನಗರಗಳ ಮಧ್ಯೆ ಇಂಟರ್‌ ಸಿಟಿ ಮೆಟ್ರೋ ರೈಲು ಸಂಪರ್ಕ ಕಾರಿಡಾರ್ ಹಂತ-1ರ ಯೋಜನೆ ಘೋಷಣೆಯಾಗುವ ಸಾಧ್ಯತೆ ಇದೆ.

Related Articles

Back to top button