ಶಿಕ್ಷಣ
ಶಂಕರನಾರಾಯಣ ಮದರ್ ತೆರೇಸಾಸ್ ಕಾಲೇಜು:CA ಫೌಂಡೇಶನ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Views: 48
ಕನ್ನಡ ಕರಾವಳಿ ಸುದ್ದಿ: ಇಲ್ಲಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ಮದರ್ ತೆರೇಸಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು CA ಫೌಂಡೇಶನ್ -2025 ರ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆಯುವುದರ ಮೂಲಕ ಜಿಲ್ಲೆಯಲ್ಲೇ ಗುರುತರ ಸಾಧನೆ ಮಾಡಿರುತ್ತಾರೆ.
ವಿದ್ಯಾರ್ಥಿಗಳಾದ ಸಾತ್ವಿಕ್ ವಿ ಶೆಟ್ಟಿ -256, ಸಾನ್ವಿ ಆರ್ ಶೆಟ್ಟಿ -221 ಶ್ರೇಯಸ್ ಯು -208 ಅಂಕಗಳನ್ನು ಪಡೆಯುವುದರ ಮೂಲಕ ಮುಂದಿನ ಹಂತಕ್ಕೆ ತೇರ್ಗಡೆಯಾಗಿರುತ್ತಾರೆ.
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ವಿಶೇಷ ತರಬೇತಿ ನೀಡುತ್ತಿರುವ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯು ಜಿಲ್ಲೆಯಲ್ಲೇ ವಿಶೇಷ ಸ್ಥಾನವನ್ನು ಪಡೆದುಕೊಂಡಿದೆ.
ಈ ಸಾಧಕ ಪ್ರತಿಭೆಗಳಿಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ವೃಂದ ಅಭಿನಂದನೆ ಸಲ್ಲಿಸಿರುತ್ತಾರೆ.