ಧಾರ್ಮಿಕ ದತ್ತಿ ಇಲಾಖೆ 60 ಸಾವಿರ ರೂ.ನಿಂದ 72 ಸಾವಿರಕ್ಕೆ ತಸ್ತೀಕ್ ಮೊತ್ತ ಏರಿಕೆ!

Views: 141
ಕನ್ನಡ ಕರಾವಳಿ ಸುದ್ದಿ : ಧಾರ್ಮಿಕ ದತ್ತಿ ಇಲಾಖೆ ಅರ್ಚಕರಿಗೆ ತಸ್ತೀಕ್ ಮೊತ್ತದ ಏರಿಕೆ ಮಾಡಲಾಗಿದೆ. 60 ಸಾವಿರ ರೂ.ನಿಂದ 72 ಸಾವಿರಕ್ಕೆ ತಸ್ತೀಕ್ ಮೊತ್ತ ಏರಿಸಲಾಗುವುದು. ಕರ್ನಾಟಕ ದೇವಾಲಯ ವಸತಿ ಕೋಶ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ. ದೇವಾಲಯಗಳ ಛತ್ರಗಳಲ್ಲಿ ರೂಮ್ ಬುಕಿಂಗ್ಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್ 2025) ಭಾಷಣದಲ್ಲಿ ತಿಳಿಸಿದ್ದಾರೆ.
ಜೈನ, ಬೌದ್ಧ ಹಾಗೂ ಸಿಖ್ಖ್ ಸಮುದಾಯಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲು ಇಡಲಾಗಿದೆ. ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ 250 ಕೋಟಿ ರೂ. ಮೀಸಲಿಡಲಾಗಿದೆ. ಜೊತೆಗೆ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿ ವೇತನ 20 ಲಕ್ಷದಿಂದ 30 ಲಕ್ಷಕ್ಕೆ ಹೆಚ್ಚಿಸಲಾಗಿದೆ. KEA ಮೂಲಕ ವೃತ್ತಿಪರ ಕೋರ್ಸ್‌ಗಳಲ್ಲಿ ಪ್ರವೇಶ ಪಡೆಯುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 5 ಲಕ್ಷ ರೂ. ಸೀಮಿತ ಸಹಾಯ ನೀಡಲಾಗುತ್ತಿದ್ದು, ಜೊತೆಗೆ ಶುಲ್ಕದಲ್ಲಿ ಶೇ.50 ರಷ್ಟು ಮರು ಪಾವತಿಯ ಸೌಲಭ್ಯವನ್ನೂ ಒದಗಿಸಲಾಗಿದೆ.
ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ಹಂತದವರೆಗೂ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಪ್ರಾರಂಭಿಸಲಾಗಿರುವ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ವಿಸ್ತರಿಸಲು ಉದ್ದೇಶಿಸಿದೆ. ಏಷಿಯನ್ ಡೆವಲಪ್‌ಮೆಂಟ್ ಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುವುದು.
ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ/ಬಾಳೆಹಣ್ಣನ್ನು ಅಜೀಮ್ ಪ್ರೇಮ್‌ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಲಾಗಿದೆ. ಈ ಯೋಜನೆಯನ್ನು 2025-26ನೇ ಸಾಲಿನಲ್ಲಿಯೂ ಮುಂದುವರೆಸಲಾಗುವುದು.