ಇತರೆ

ಸಾಸ್ತಾನ:ಮೊಬೈಲ್ ಕೊಡದಿದ್ದಕ್ಕೆ ಪಿಯು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

Views: 244

ಕನ್ನಡ ಕರಾವಳಿ ಸುದ್ದಿ: ಮೊಬೈಲ್ ಕೊಡದಿದ್ದಕ್ಕೆ ಪಿಯು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಸಾಸ್ತಾನದ ಕುಂಬಾರಬೆಟ್ಟುವಿನಲ್ಲಿ ಸಂಭವಿಸಿದೆ.

ಮೃತ ವಿದ್ಯಾರ್ಥಿನಿ ಕುಂಬಾರಬೆಟ್ಟು ನಿವಾಸಿ ದಿನೇಶ್ ಮೊಗವೀರ ಅವರ ಪುತ್ರಿ ದಿಶಾ(16) ಎಂದು ಗುರುತಿಸಲಾಗಿದೆ.

ವಿದ್ಯಾರ್ಥಿನಿ ದಿಶಾ ಮೊಬೈಲ್‌ ಹಿಡಿದುಕೊಂಡು ಕುಳಿತಿದ್ದ ಹಿನ್ನೆಲೆಯಲ್ಲಿ ದಿಶಾಳ ತಾಯಿ ಜೋರು ಮಾಡಿ ಮೊಬೈಲ್ ಕಸಿದುಕೊಂಡಿದ್ದಾರೆ. ಇದರಿಂದ ಕೋಪಗೊಂಡ ದಿಶಾ ನೇರವಾಗಿ ಕೋಣೆಯ ಬಾಗಿಲು ಹಾಕಿಕೊಂಡಿದ್ದು, ತಾಯಿ ಜೋರು ಮಾಡಿ ಬಾಗಿಲು ತೆರೆಯಲು ಹೇಳಿದ್ದಾರೆ. ಎಷ್ಟು ಹೊತ್ತಾದರೂ ಬಾಗಿಲು ತೆರೆಯದೆ ಇರುವುದನ್ನು ಕಂಡ ತಾಯಿ, ಪರಿಶೀಲನೆ ನಡೆಸಿದಾಗ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದೆ. ಮನೆಯ ಕಿಟಕಿಯ ಕಂಬಿಗೆ ಹಗ್ಗ ಹಾಕಿಕೊಂಡು ಆತ್ಮಹತ್ಯೆಯತ್ನಿಸಿದ್ದು, ತಕ್ಷಣ ಸ್ಥಳೀಯರು ಬಂದು ಬಾಲಕಿಯನ್ನು ರಕ್ಷಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಜೀವನ್‌ಮಿತ್ರ ಅಂಬ್ಯುಲೆನ್ಸ್‌ನ ನಾಗರಾಜ್ ಪುತ್ರನ್ ಮತ್ತು ಕಿಶೋ‌ರ್ ಶೆಟ್ಟಿ ಬಾಲಕಿಯ ರಕ್ಷಣೆಗೆ ಪ್ರಯತ್ನಿಸಿದ್ದು, ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾಳೆ.

ಸ್ಥಳಕ್ಕೆ ಕೋಟ ಕ್ರೈಂ ಪಿಎಸ್‌ಐ ಸುಧಾ ಪ್ರಭು ಮತ್ತು ಎಎಸ್ಐ ರವಿ ಕುಮಾರ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button
error: Content is protected !!