ಆರ್ಥಿಕ

ಎರಡು ತಿಂಗಳ ಗೃಹ ಲಕ್ಷ್ಮೀ ಹಣ ಸದ್ಯದಲ್ಲೇ ಕ್ಲಿಯರ್‌; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Views: 31

ಕನ್ನಡ ಕರಾವಳಿ ಸುದ್ದಿ:ಸದ್ಯದಲ್ಲೇ ಜನವರಿ, ಫೆಬ್ರವರಿ ಹಣ ಕ್ಲಿಯರ್‌ ಆಗಲಿದೆ. ಗೃಹ ಲಕ್ಷ್ಮೀ ಹಣ 2-3 ತಿಂಗಳಿಗೊಮ್ಮೆ ಬರುತ್ತದೆ ಎನ್ನುವುದು ತಪ್ಪು.  ನವೆಂಬರ್‌, ಡಿಸೆಂಬರ್‌ ತಿಂಗಳ ಹಣ ಕ್ಲಿಯರ್ ಆಗಿದೆ. ಜನವರಿ, ಫೆಬ್ರವರಿ ಹಣ ಸದ್ಯದಲ್ಲೇ ಕ್ಲಿಯರ್‌ ಆಗಲಿದೆ.ಯಾವುದೇ ಕಾರಣಕ್ಕೂ ಕ್ಲಿಯರ್‌ ಆಗದೇ ಉಳಿಯುವುದಿಲ್ಲ ಎಂದರು.

ಗೃಹ ಲಕ್ಷ್ಮೀ ಯೋಜನೆಯನ್ನು ಯಾವುದೇ ಕಾರಣಕ್ಕೂ ಪರಿಷ್ಕರಣೆ ಮಾಡುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಗೃಹ ಲಕ್ಷ್ಮೀ ಯೋಜನೆಯು ಸದ್ಯ ಈಗ ಯಾವ ರೀತಿ ನಡೆದುಕೊಂಡು ಹೋಗುತ್ತಿದೆಯೋ, ಹಾಗೆಯೇ ಮುಂದುವರೆದುಕೊಂಡು ಹೋಗಲಿದೆ. ಅದರಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಕೆಲವೊಂದು ಇಲಾಖೆಗಳಲ್ಲಿ ಕಳೆದ ಬಜೆಟ್ನಲ್ಲಿ ನೀಡಿದ ಹಣವೇ ಖರ್ಚಾಗುತ್ತಿಲ್ಲವೆಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನನ್ನ ಇಲಾಖೆ ಇಷ್ಟು ವರ್ಷ ಬೇರೆ ರೀತಿಯಲ್ಲಿ ಇತ್ತು. ಆದರೆ, ಈಗ ಬಹುದೊಡ್ಡ ಗಾತ್ರದ ಬಜೆಟ್‌ನ್ನು ಒಳಗೊಂಡಂತಹ ಇಲಾಖೆಯಾಗಿದೆ. ಅದರಲ್ಲೂ ಗೃಹ ಲಕ್ಷ್ಮೀ ಯೋಜನೆ ಬಂದಿರುವುದರಿಂದ ಒಂದು ವರ್ಷಕ್ಕೆ ಸುಮಾರು 32 ಸಾವಿರ ಕೋಟಿ ರೂಪಾಯಿಯಷ್ಟು ಹಣವನ್ನು ಗೃಹ ಲಕ್ಷ್ಮೀ ಯವರಿಗೆ ನೀಡಲಾಗುತ್ತಿದೆ. ನಮ್ಮ ಇಲಾಖೆಗೆ ನೀಡಿದ ಅನುದಾನ ಪೈಕಿ ಯಾವುದೇ ಅನುದಾನ ಉಳಿದಿಲ್ಲ. ಎಲ್ಲವೂ ಸರಿಯಾದ ರೀತಿಯಲ್ಲಿ ಖರ್ಚಾಗಿದೆ. ಶೇಕಡ 10 ರಷ್ಟು ಮಾತ್ರ ಅನುದಾನ ಮಿಕ್ಕಿರಬಹುದು. ಅದು ಕೂಡ ಮಾರ್ಚ್‌ 31ರೊಳಗೆ ಖರ್ಚಾಗಲಿದೆ ಎಂದು ಹೇಳಿದರು.

 

 

Related Articles

Back to top button