ಯುವಜನ
ಅಪ್ರಾಪ್ತ ಬಾಲಕಿಗೆ ಐಸ್ ಕ್ರೀಂ ಆಸೆ ತೋರಿಸಿ ಅಪಹರಣ: ಅತ್ಯಾಚಾರಕ್ಕೆ ಯತ್ನ

Views: 61
ಕನ್ನಡ ಕರಾವಳಿ ಸುದ್ದಿ: ಅಪ್ರಾಪ್ತ ಬಾಲಕಿಗೆ ಐಸ್ ಕ್ರೀಮ್ ಆಸೆ ತೋರಿಸಿ ಬಾಲಕಿಯನ್ನು ಕಿಡ್ನ್ಯಾಪ್ ಮಾಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಸಾಧಿಕ್ (52) ಎಂಬಾತ ಅಪ್ರಾಪ್ತ ಬಾಲಕಿಗೆ ಐಸ್ ಕ್ರೀಂ ಕೊಡಿಸುವುದಾಗಿ ಕರೆದೊಯ್ದು, ಆಕೆಯನ್ನು ಅಪಹರಿಸಿ ಅತ್ಯಾಚಾರವೆಸಗಲು ಯತ್ನಿಸಿದ್ದಾನೆ. ಸದ್ಯ ಕಾಮಾಂಧನನ್ನು ಪೊಲೀಸರು ಬಂಧಿಸಿದ್ದಾರೆ.
ಚಿತ್ರದುರ್ಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ಬಂಧಿತ ಆರೋಪಿ ವಿರುದ್ಧ ಪೊಕ್ಸೋ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.