ಸಾಂಸ್ಕೃತಿಕ
ಬಾಲಿವುಡ್ ಹಿರಿಯ ನಟ ದೇಬ್ ಮುಖರ್ಜಿ ನಿಧನ

Views: 18
ಕನ್ನಡ ಕರಾವಳಿ ಸುದ್ದಿ: ಬಾಲಿವುಡ್ ಚಿತ್ರರಂಗದ ಹಿರಿಯ ನಟ ದೇಬ್ ಮುಖರ್ಜಿ ಮುಂಬೈನಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.
ವಯೋಸಹಜ ಕಾಯಿಲೆಯಿಂದಾಗಿ ಇಂದು ಬೆಳಿಗ್ಗೆ ಮುಂಬೈನ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಯುವ ನಿರ್ದೇಶಕ ಅಯನ್ ಮುಖರ್ಜಿ ಅವರ ತಂದೆ ದೇಬ್ ಮುಖರ್ಜಿ, 1965ರಿಂದ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು.
ಏಕ್ ಬಾರ್ ಮುಸ್ಕುರಾದೊ, ಆಸೂ ಬನ್ ಗಯೇ, ಫೂಲ್, ಅಭಿನೇತ್ರಿ ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದರು. ಕಮೀನೆ ಅವರ ಕೊನೆಯ ಚಿತ್ರವಾಗಿದೆ.