ಇತರೆ

ಶಾಲೆಯಿಂದ ಮಕ್ಕಳನ್ನು ಕರೆತರುವಾಗ ಅಪಘಾತ:ತಾಯಿ ಸ್ಥಳದಲ್ಲೇ ಸಾವು

Views: 219

ಕನ್ನಡ ಕರಾವಳಿ ಸುದ್ದಿ:  ಬೊಲೆರೋ ವಾಹನ ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟು, ಅವರ ಇಬ್ಬರು ಮಕ್ಕಳು ತೀವ್ರವಾಗಿ ಗಾಯಗೊಂಡ ಘಟನೆ ಮಳವಳ್ಳಿ ಪಟ್ಟಣದ ಹೊರವಲಯದ ಕೊಳ್ಳೆಗಾಲ ರಸ್ತೆಯ ಕಣಿಗಲ್ ಹಳ್ಳದ ಬಳಿ ನಡೆದಿದೆ.

ಮಳವಳ್ಳಿ ತಾಲೂಕಿನ ಕುಂದೂರು ಗ್ರಾಮದ ಶಿಲ್ಫಾ (39) ಮೃತಪಟ್ಟವರು. ಇವರ 7 ವರ್ಷದ ಹಾಗೂ 5 ವರ್ಷದ ಇಬ್ಬರು ಮಕ್ಕಳಿಗೆ ತೀವ್ರವಾದ ಗಾಯಗಳಾಗಿವೆ.

ಶುಕ್ರವಾರ ಸಾಯಂಕಾಲ ಶಾಲೆಯಿಂದ ಮಕ್ಕಳನ್ನು ಕರೆದುಕೊಂಡು ಹೋಗುವ ವೇಳೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟು ಬಿದ್ದು ಪರಿಣಾಮ ಶಿಲ್ಪಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಇಬ್ಬರೂ ಮಕ್ಕಳನ್ನು ಮಳವಳ್ಳಿ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.

ಮಳವಳ್ಳಿ ಪಟ್ಟಣದ ಸರ್ಕಾರಿ ಆಸ್ಪತ್ರೆ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಶಿಲ್ಪಾ ಮೃತದೇಹವನ್ನು ಕುಟುಂಬಸ್ಥರಿಗೆ ನೀಡಲಾಗಿದೆ. ಮಳವಳ್ಳಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Related Articles

Back to top button
error: Content is protected !!