ಕನ್ನಡ ಕರಾವಳಿ ಸುದ್ದಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಧತ್ವ ನಿವಾರಣಾ ವಿಭಾಗ, ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರ, ಸಾಧನಾ ಸಮಾಜ ಸೇವಾ ವೇದಿಕೆ ಮತ್ತು ಶಿರೂರು ಮುದ್ದು ಮನೆ ಪಾರ್ವತಿ ಮಹಾಬಲ ಶೆಟ್ಟಿ ಚಾರಿಟಬಲ್ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಮಾ. 23, ಭಾನುವಾರ ಬೆಳಗ್ಗೆ 9ರಿಂದ ಮಧ್ಯಾಹ್ನ 12ರ ವರೆಗೆ ಮರವಂತೆ ಸಾಧನಾ ಸಮುದಾಯ ಭವನದಲ್ಲಿ ಉಚಿತ ನೇತ್ರ ತಪಾಸಣೆ ನಡೆಯುವುದು.
ಅಗತ್ಯ ಇರುವವರಿಗೆ ಶಿರೂರು ಮುದ್ದು ಮನೆ ಪಾರ್ವತಿ ಮಹಾಬಲ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆಯಲ್ಲಿ ಸಂಪೂರ್ಣ ಉಚಿತವಾಗಿ ಕಣ್ಣಿನ ಚಿಕಿತ್ಸೆ ನೀಡಲಾಗುವುದು. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಘಟಕ ಸಂಸ್ಥೆಗಳು ವಿನಂತಿಸಿವೆ.