ರಾಜಕೀಯ
BREAKING NEWS- ಪಳನಿಸ್ವಾಮಿ- ಅಮಿತ್ ಶಾ ಬೇಟಿ… ತಮಿಳುನಾಡಿನಲ್ಲಿ ಮತ್ತೆ BJP, AIADMK ಮೈತ್ರಿ?

Views: 61
ಕನ್ನಡ ಕರಾವಳಿ ಸುದ್ದಿ: ತಮಿಳುನಾಡಿನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಹವಣಿಸುತ್ತಿರುವ ಬಿಜೆಪಿ,ಮುಂದಿನ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ಆರಂಭಿಸಿದ್ದು, ಇದರ ಮೊದಲ ಭಾಗವಾಗಿ ತಮಿಳುನಾಡಿನಲ್ಲಿ ಮತ್ತೆ AIADMK ಜೊತೆ ಮೈತ್ರಿಗೆ ಮುಂದಾಗಿದೆ ಎನ್ನಲಾಗುತ್ತಿದೆ.
ಇದಕ್ಕೆ ಪುಷ್ಟಿ ನೀಡುವಂತೆ ಅತ್ತ ತಮಿಳುನಾಡು ಮಾಜಿ ಸಿಎಂ, ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ದೆಹಲಿಗೆ ದೌಡಾಯಿಸಿದ್ದು, ಈ ಮೂಲಕ ಮತ್ತೆ ತಮಿಳುನಾಡಿನಲ್ಲಿಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಪಳನಿಸ್ವಾಮಿ ಮಂಗಳವಾರ ರಾತ್ರಿ ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿಯ ಹಿರಿಯ ನಾಯಕ ಅಮಿತ್ ಶಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸುವ ಸಾಧ್ಯತೆಯಿದೆ ಎಂದು ಎಐಎಡಿಎಂಕೆ ಮೂಲಗಳು ತಿಳಿಸಿವೆ.