ಕೃಷಿ

ನಂದಿನಿ ಹಾಲಿನ ದರ 4 ರೂ.ಏರಿಕೆ

Views: 71

ಕನ್ನಡ ಕರಾವಳಿ ಸುದ್ದಿ:ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 4 ರೂಪಾಯಿ ಏರಿಕೆ ಮಾಡಲು ಸಚಿವ ಸಂಪುಟ ಸಮ್ಮತಿಸಿದೆ.

ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 5 ರೂಪಾಯಿ ಏರಿಕೆ ಮಾಡುವಂತೆ ಕರ್ನಾಟಕ ಮಹಾಮಂಡಲ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಲು ಒಕ್ಕೂಟದ ಅಧ್ಯಕ್ಷ ಭೀಮನಾಯಕ್ ಸೇರಿದಂತೆ ಅಧಿಕಾರಿಗಳ ಜತೆ ಚರ್ಚಿಸಿ ಸಚಿವ ಸಂಪುಟದಲ್ಲಿ ಹಾಲು ದರ ಏರಿಕೆ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದರು.

ಹಾಲಿನ ದರ ಏರಿಕೆಗೆ ಒಪ್ಪಿಗೆ ನೀಡಿದರೂ ಏರಿಕೆಯಾಗುವ ಸಂಪೂರ್ಣ ದರ ಹಾಲು ಉತ್ಪಾದಕರಿಗೆ ತಲುಪಬೇಕು ಎಂದು ಮುಖ್ಯಮಂತ್ರಿಗಳು ಈ ಸಭೆಯಲ್ಲಿ ಹೇಳಿದ್ದರು.

ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಪ್ರತಿ ಲೀಟರ್‌ಗೆ 4 ರೂಪಾಯಿ ಏರಿಸಲು ಸಂಪುಟ ಒಪ್ಪಿಗೆ ನೀಡಿದೆ ಎಂದು ಮೂಲಗಳು ಹೇಳಿವೆ.

ಈಗಾಗಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ ದರ, ಮೆಟ್ರೋ ಪ್ರಯಾಣ ದರ, ವಿದ್ಯುತ್ ದರಗಳನ್ನು ಏರಿಕೆ ಮಾಡಿದ್ದು, ಗಾಯದ ಮೇಲೆ ಬರೆ ಎಳೆದಂತೆ ಹಾಲಿನ ದರವೂ ಏರಿಕೆಯಾಗಿದ್ದು, ಜನಸಾಮಾನ್ಯರಿಗೆ ದರ ಏರಿಕೆಯ ಬಿಸಿ ತಟ್ಟಲಿದೆ.

 

Related Articles

Back to top button
error: Content is protected !!