ಸಾಂಸ್ಕೃತಿಕ
ಜೈಲು ಸೇರಿರುವ ರನ್ಯಾ ರಾವ್: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಲು ಮುಂದಾದ ಪತಿ!

Views: 87
ಕನ್ನಡ ಕರಾವಳಿ ಸುದ್ದಿ: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರನ್ಯಾ ರಾವ್ ಗೆ ಮತ್ತೊಂದು ಶಾಕ್ ಎದುರಾಗಿದೆ. ರನ್ಯಾ ರಾವ್ ಪತಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.
ಜತಿನ್ ಹುಕ್ಕೇರಿ
ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೀಡಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರನ್ಯಾ ರಾವ್ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಜಾಮೀನು ಸಿಗದ ಟೆನ್ಶನ್ ನಲ್ಲಿರುವ ರನ್ಯಾ ರಾವ್ ಗೆ ಇದೀಗ ಮತ್ತೊಂದು ಆಘಾತ ಎದುರಾಗಿದೆ. ಪತಿ ಜತಿನ್ ಹುಕ್ಕೇರಿ ರನ್ಯಾಗೆ ವಿಚ್ಛೇದನ ನೀಡಲು ಮುಂದಾಗಿದ್ದು, ಕೋರ್ಟ್ ಗೆ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ರನ್ಯಾ ರಾವ್ ಮದುವೆಯಾದಾಗಿನಿಂದ ಒಂದಲ್ಲ ಒಂದು ಸಮಸ್ಯೆ ಕಾರಣಕ್ಕೆ ಈಗಾಗಲೇ ರನ್ಯಾಳಿಂದ ಅಂತರ ಕಾಯ್ದುಕೊಂಡಿರುವ ಜಿತನ್ ಹುಕ್ಕೇರಿ, ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ಹೊರ ಬರುತ್ತಿದ್ದಂತೆ ರನ್ಯಾಳಿಗೆ ವಿಚ್ಛೇದನ ಕೊಡಲು ಮುಂದಾಗಿದ್ದಾರೆ ಎನ್ನಲಾಗಿದೆ.