ಇತರೆ

ಕೋಟ: ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ: ಪಾದಚಾರಿ ಸಾವು 

Views: 137

ಕನ್ನಡ ಕರಾವಳಿ ಸುದ್ದಿ:ಸಾಲಿಗ್ರಾಮದಿಂದ ತೆಕ್ಕಟ್ಟೆ ಕಡೆಗೆ ಹೋಗುತ್ತಿದ್ದ ಬೈಕೊಂದು ಸವಾರ ನಿಯಂತ್ರಣ ತಪ್ಪಿ ಕೋಟ ಪೆಟ್ರೋಲ್ ಬಂಕ್ ಸಮೀಪ ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಚಂದ್ರಶೇಖರ್ ಶೆಟ್ಟಿಗೆ ಡಿಕ್ಕಿ ಹೊಡೆದ ಪರಿಣಾಮ ಕೋಟ ಕಾರ್ತಟ್ಟು ಚಂದ್ರಶೇಖರ ಶೆಟ್ಟಿ(62) ಮೃತಪಟ್ಟಿದ್ದಾರೆ.

ಗಾಯಗೊಂಡವರನ್ನು ತಕ್ಷಣ ಜೀವನ್ ಮಿತ್ರ ನಾಗರಾಜ್ ಪುತ್ರನ್ ಹಾಗೂ ಆಂಬುಲೆನ್ಸ್ ಚಾಲಕ ಕಿಶೋರ್ ಶೆಟ್ಟಿ ಸೇರಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿರುತ್ತಾರೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಸ್ಪಂದಿಸದೆ ಚಂದ್ರಶೇಖರ ಶೆಟ್ಟಿ ಮೃತಪಟ್ಟಿರುತ್ತಾರೆ.

ಕೋಟ ಪೊಲೀಸರು ತಕ್ಷಣ ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Articles

Back to top button
error: Content is protected !!