ರಾಜಕೀಯ
ಬಿಜೆಪಿ ಕಾರ್ಯಕತ೯ರು ಮುಂದಿನ ಲೋಕ ಸಭಾ ಚುನಾವಣೆಗೆ ಸಜ್ಜಾಗಿ : ಮೋನಪ್ಪ ಭಂಡಾರಿ

Views: 0
ಕುಂದಾಪುರ : ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲದ ವತಿಯಿಂದ ಕುಂದಾಪುರ ವಿಧಾನ ಸಭಾ ಕ್ಷೇತ್ರದ ಅವಲೋಕನ ಸಭೆ ಕೋಟೇಶ್ವರ ಸರಸ್ಪತಿ ಕಲ್ಯಾಣ ಮಂಟಪದಲ್ಲಿ ನಡೆಯಿತು.
ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಮುಂದಿನ ಲೋಕ ಸಭಾ ಚುನಾವಣೆಗೆ ಈಗಿಂದಲೇ ಎಲ್ಲರೂ ಸಜ್ಜಾಗಬೇಕು ಎಂದರು.
ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಕುಯಿಲಾಡಿ, ಕುಂದಾಪುರ ಮಂಡಲದ ಅಧ್ಯಕ್ಷ ಶಂಕರ ಅಂಕದಕಟ್ಟೆ, ಜಿಲ್ಲಾ ಪ್ರಭಾರಿ ಬೈಕಾಡಿ ಸುಪ್ರಸಾದ ಶೆಟ್ಟಿ, ಕಾರ್ಯದಶಿ೯ ಸತೀಶ್ ಪೂಜಾರಿ ವಕ್ವಾಡಿ, ಸುರೇಶ್ ಶೆಟ್ಟಿ ಗೋಪಾಡಿ, ಮಂಡಲದ ಬೂತ್ ಅಧ್ಯಕ್ಷರು, ವಿವಿಧ ಮೋಚಾ೯ ಪದಾಧಿಕಾರಿಗಳು, ಪಕ್ಷದ ಮುಖಂಡರು ಭಾಗವಹಿಸಿದರು.






