ರಾಜ್ಯದ ಖಜಾನೆಯನ್ನು ಕಳ್ಳರೆಲ್ಲರೂ ಸೇರಿ ಲೂಟಿ ಮಾಡಿದ್ದಾರೆ:ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ

Views: 54
ಕನ್ನಡ ಕರಾವಳಿ ಸುದ್ದಿ:ರಾಜ್ಯದ ಖಜಾನೆಯನ್ನು ಕಳ್ಳರೆಲ್ಲರೂ ಸೇರಿ ಲೂಟಿ ಮಾಡಿದ್ದಾರೆ. ಕೊಳ್ಳೆ ಹೊಡೆಯಲು ಮತ್ತೆ ಖಜಾನೆ ಭರ್ತಿಗೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಟೀಕಿಸಿದ್ದಾರೆ.
ಜನಾಕ್ರೋಶ ಯಾತ್ರೆಯ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಅಲಿಬಾಬ ಮತ್ತು 40 ಕಳ್ಳರ ತದ್ರೂಪವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಸಚಿವ ಸಂಪುಟದ ಡೋಗಿ ಮಂತ್ರಿಗಳು. ಸರ್ಕಾರದ ಖಜಾನೆಯನ್ನು ಕೊಳ್ಳೆ ಹೊಡೆದ ಇವರು ಬೆಲೆ ಏರಿಕೆಯ ಹೆಸರಿನಲ್ಲಿ ಜನರ ಜೇಬಿಗೂ ಕೈಹಾಕಿದ್ದಾರೆ ಎಂದರು.
ಸಿದ್ದರಾಮಯ್ಯ ಎರಡನೇ ಅವಧಿಗೆ ಮುಖ್ಯಮಂತ್ರಿಯಾದ ಬಳಿಕ ಹಾಲು, ಅಡುಗೆ ಎಣ್ಣೆ, ಇಂಧನ, ಕಂದಾಯ ಸೇರಿ 48 ರೀತಿಯಲ್ಲಿ ಬೆಲೆ ಏರಿಕೆ ಮಾಡಲಾಗಿದೆ. ರಾಜ್ಯದ ಜನರು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ನಿವೃತ್ತ ಪೊಲೀಸ್ ಮಹಾನಿರ್ದೇಶಕರೊಬ್ಬರು ಕೊಲೆಯಾಗಿದ್ದಾರೆ
ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ನಿವೃತ್ತ ಪೊಲೀಸ್ ಮಹಾನಿರ್ದೇಶಕರೊಬ್ಬರು ಕೊಲೆಯಾಗಿದ್ದಾರೆ. ಜನರು ಮನೆಯಿಂದ ಹೊರಬರಲು ಭಯಪಡು ಸ್ಥಿತಿ ನಿರ್ಮಾಣವಾಗಿದೆ. ರಾಜಕೀಯ ವಿರೋಧಿಗಳನ್ನು ಆತ್ಮಹತ್ಯೆಗೆ ಪ್ರಚೋದಿಸುವ ಹುನ್ನಾರವೂ ನಡೆಯುತ್ತಿದೆ ಎಂದರು.