ಪೈಶಾಚಿಕ ಕೃತ್ಯಕ್ಕೆ ತೀವ್ರ ಖಂಡನೆ: 48 ಗಂಟೆಯೊಳಗೆ ತೊರೆಯಬೇಕು ಖಡಕ್ ವಾರ್ನಿಂಗ್!

Views: 119
ಕನ್ನಡ ಕರಾವಳಿ ಸುದ್ದಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್‌ನಲ್ಲಿ ನಡೆದ ಪೈಶಾಚಿಕ ಕೃತ್ಯಕ್ಕೆ ದೇಶದಾದ್ಯಂತ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಪ್ರಧಾನಿ ಮೋದಿ ನೇತೃತ್ವದಲ್ಲಿ ಸತತ 3 ಗಂಟೆಗಳ ಕಾಲ ಕೇಂದ್ರ ಸಂಪುಟ ಸಮಿತಿ ಸಭೆ ನಡೆದಿದೆ.
ಸತತ ಮೂರು ಗಂಟೆಗಳ ಕಾಲ ನಡೆದ ಹೈವೋಲ್ವೇಜ್ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಂಡಿದ್ದು, ಉಗ್ರರ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವ ತೀರ್ಮಾನ ಮಾಡಲಾಗಿದೆ.
ಸಾರ್ಕ್ ವೀಸಾ ವಿನಾಯಿತಿ ಯೋಜನೆ ವೀಸಾಗಳ ಅಡಿಯಲ್ಲಿ ಪಾಕಿಸ್ತಾನಿ ಪ್ರಜೆಗಳು ಭಾರತಕ್ಕೆ ಪ್ರಯಾಣಿಸಲು ನೀಡಿದ ಅನುಮತಿಯನ್ನು ತಡೆಹಿಡಿಯಲಾಗುತ್ತಿದೆ. ಈ ಹಿಂದೆ ನೀಡಿದ್ದ ಯಾವುದೇ SVES ವೀಸಾಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಾಗುತ್ತಿದೆ. ಈ ವೀಸಾ ಅಡಿಯಲ್ಲಿ ಭಾರತದಲ್ಲಿರುವ ಯಾವುದೇ ಪಾಕಿಸ್ತಾನಿ ಪ್ರಜೆ 48 ಗಂಟೆಯೊಳಗೆ ಭಾರತ ತೊರೆಯಬೇಕೆಂದು ಖಡಕ್ ವಾರ್ನಿಂಗ್ ನೀಡಲಾಗಿದೆ.
ಜೊತೆಗೆ ನವದೆಹಲಿಯಲ್ಲಿರುವ ಪಾಕಿಸ್ತಾನಿ ಹೈಕಮಿಷನ್, ಮಿಲಿಟರಿ, ನೌಕಾ ಮತ್ತು ವಾಯು ಸಲಹೆಗಾರರನ್ನು ಹಂತಹಂತವಾಗಿ ಭಾರತದಿಂದ ಕಡಿತಗೊಳಿಸುವ ನಿರ್ಧಾರ ತೆಗೆದುಕೊಂಡಿದೆ. ಜೊತೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ.