ಜನಮನ

ಬ್ರಹ್ಮಾವರ:ವಾರಂಬಳ್ಳಿಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ಸರ ಕದ್ದು ಪರಾರಿ 

Views: 132

ಕನ್ನಡ ಕರಾವಳಿ ಸುದ್ದಿ : ಕಾರಿನಲ್ಲಿ ಬಂದ ಯುವಕರು ಮಹಿಳೆ ಮೇಲೆ ಹಲ್ಲೆ ನಡೆಸಿ ಕುತ್ತಿಗೆಯಲ್ಲಿದ್ದ ಕರಿಮಣಿ ಸರ ಕದ್ದು ಪರಾರಿಯಾಗಿರುವ ಘಟನೆ ಬ್ರಹ್ಮಾವರದ ವಾರಂಬಳ್ಳಿ ಎಂಬಲ್ಲಿ ನಡೆದಿದೆ.

ವಾರಂಬಳ್ಳಿ ಗ್ರಾಮದ ಪದ್ಮ(70) ಎಂಬುವವರು ಮನೆಯ ಕಂಪೌಂಡಿನ ಹೊರಗಡೆ ಹೂವುಗಳನ್ನು ಕೊಯ್ಯುತ್ತಿರುವಾಗ ಕಾರಿನಲ್ಲಿ ಬಂದ ಎರಡು ಮೂರು ಮಂದಿ, ಪದ್ಮ ಅವರಿಗೆ ಹಲ್ಲೆ ನಡೆಸಿ, ಕುತ್ತಿಗೆಯಲ್ಲಿದ್ದ ಸುಮಾರು 40 ಗ್ರಾಮ್ ತೂಕದ ಕರಿಮಣಿ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Related Articles

Back to top button
error: Content is protected !!