ಇತರೆ

ನೆಲಮಂಗಲದಲ್ಲಿ ಚಲಿಸುತ್ತಿದ್ದ ಆಟೋಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ: ಒಂದೇ ಕುಟುಂಬದ ಮೂವರು ಸಾವು

Views: 58

ಕನ್ನಡ ಕರಾವಳಿ ಸುದ್ದಿ: ನೆಲಮಂಗಲದ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಆಟೋಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿಯಾಗಿದ್ದು, ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.

ಆಟೋ ಚಾಲಕ ಶ್ರೀನಿವಾಸ್ (40), ಪುಟ್ಟಮ್ಮ (55) ಮೃತ ದುರ್ದೈವಿಗಳು. ಗಂಭೀರವಾಗಿ ಗಾಯಗೊಂಡಿದ್ದ ವರ್ಷಿಣಿ (13) ಕೂಡ ಸಾವನ್ನಪ್ಪಿದ್ದಾರೆ.

ಇನ್ನೂ ಮೂವರ ಸ್ಥಿತಿ ಗಂಭೀರವಾಗಿದೆ.ಲೇಖನ (11) ಕೂಡ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ನಾಗರತ್ಮಮ್ಮ (35), ವೆಂಕಟೇಶ್ (37) ಸಣ್ಣ ಪುಟ್ಟ ಗಾಯಗಳಾಗಿದೆ.

ಬಸ್ ಡಿಕ್ಕಿಯಾದ ರಭಸಕ್ಕೆ ಆಟೋ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಓರ್ವ ಮಹಿಳೆ, ಓರ್ವ ಪುರುಷ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸರ ಸ್ಥಳಕ್ಕೆ ಭೇಟಿ ನೀಡಿ ಅಪಘಾತದ ವಾಹನಗಳ ತೆರವು ಕಾರ್ಯ ನಡೆಸಿದ್ದಾರೆ.

ಕೆಎಸ್ಆರ್‌ಟಿಸಿ ಬಸ್ ಬೆಂಗಳೂರಿನಿಂದ ಹೊರನಾಡಿಗೆ ಸಂಚರಿಸುತ್ತಾ ಇತ್ತು.ಸಂಬಂಧಿಕರ ಮನೆಯಲ್ಲಿ ಕಾರ್ಯಕ್ರಮ ಮುಗಿಸಿ ಒಂದೇ ಕುಟುಂಬದ 6 ಜನ ಆಟೋದಲ್ಲಿ ಸಂಚಾರ ನಡೆಸುತ್ತಿದ್ದರು. ಆಟೋ ಚಾಲಕ ಯೂಟರ್ನ್ ತೆಗೆದುಕೊಳ್ಳುವ ವೇಳೆ ಈ ಅಪಘಾತ ಸಂಭವಿಸಿದೆ.

Related Articles

Back to top button
error: Content is protected !!