ಇತರೆ

ಆರ್ಡಿ ಸಮೀಪ ಚಾಲಕನ ಹತೋಟಿ ತಪ್ಪಿ ಟೂರಿಸ್ಟ್ ಬಸ್ ಮರಕ್ಕೆ ಡಿಕ್ಕಿ 

Views: 156

ಕನ್ನಡ ಕರಾವಳಿ ಸುದ್ದಿ: ರಾಜ್ಯ ಹೆದ್ದಾರಿ ಆರ್ಡಿ ಸಮೀಪದ ಕೊಂಜಾಡಿ ಜಡ್ಡಮರ್ಗಿ ಬಳಿ ಬೆಂಗಳೂರಿನಿಂದ ಕುಂದಾಪುರ ಕಡೆಗೆ ಪ್ರಯಾಣಿಕರಿದ್ದ ಟೂರಿಸ್ಟ್ ಬಸ್ ಮಂಗಳವಾರ ಚಾಲಕನ ಹತೋಟಿ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದಿದೆ.ಢಿಕ್ಕಿ ಹೊಡೆದ ಪರಿಣಾಮ ವಾಹನದ ಮುಂಭಾಗ ಜಖಂಗೊಂಡಿದೆ.

ಟೂರಿಸ್ಟ್ ಬಸ್‌ನಲ್ಲಿದ್ದ ಪ್ರಯಾಣಿಕರು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮ ಮುಗಿಸಿಕೊಂಡು ತ್ರಾಸಿಗೆ ಮರಳುತ್ತಿದ್ದರು. ಬೆಳಗಿನ ಜಾವ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಟೂರಿಸ್ಟ್ ಬಸ್‌ ಮರಕ್ಕೆ ಢಿಕ್ಕಿ ಹೊಡೆದಿದೆ.ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಕ್ಕಳು, ಮಹಿಳೆಯರು ಸೇರಿದಂತೆ ಹಲವು ಪ್ರಯಾಣಿಕರಿಗೆ ಅಲ್ಪಸ್ವಲ್ಪ ಗಾಯವಾಗಿದೆ. ಗಾಯಗೊಂಡವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳೀಯರು ಘಟನಾ ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು.

Related Articles

Back to top button