ಇತರೆ
ಗಂಗೊಳ್ಳಿ: ಬಸ್ಸು ಡಿಕ್ಕಿಯಾಗಿ ರಸ್ತೆ ದಾಟಲು ನಿಂತಿದ್ದ ಪಾದಚಾರಿ ಸಾವು

Views: 0
ಕುಂದಾಪುರ: ರಸ್ತೆ ದಾಟಲು ನಿಂತಿದ್ದ ವೇಳೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತರನ್ನು ಸಾಸ್ತಾನ ರಾಜು ಪೂಜಾರಿ ಎಂದು ಗುರುತಿಸಲಾಗಿದೆ. ರಸ್ತೆ ದಾಟಲು ನಿಂತಿದ್ದ ರಾಜು ಪೂಜಾರಿ ಕುಂದಾಪುರ ಕಡೆಯಿಂದ ಬೈಂದೂರಿತ್ತ ಸಾಗುತ್ತಿದ್ದ ಬಸ್ ಅವರಿಗೆ ಡಿಕ್ಕಿ ಹೊಡೆದಿದೆ.ಪರಿಣಾಮ ಅವರು ರಸ್ತೆ ಗೆ ಬಿದ್ದು ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಪ್ರಕರಣ ಗಂಗೊಳ್ಳಿ ಠಾಣೆಯಲ್ಲಿ ದಾಖಲಾಗಿದೆ






