ಕರಾವಳಿ
ಬ್ರಹ್ಮಾವರ: ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲು 20 ಸಾವಿರ ಲಂಚ ಸ್ವೀಕರಿಸುವಾಗ ಮೆಸ್ಕಾಂ ಎಂಜಿನಿಯರ್ ಅರೆಸ್ಟ್!

Views: 118
ಕನ್ನಡ ಕರಾವಳಿ ಸುದ್ದಿ: ಬ್ರಹ್ಮಾವರದ ಮೆಸ್ಕಾಂ ಸಹಾಯಕ ಎಂಜಿನಿಯರ್ ಕಚೇರಿಯಲ್ಲಿ 20 ಸಾವಿರ ಲಂಚದ ಹಣ ಪಡೆಯುತ್ತಿದ್ದಾಗ ಶುಕ್ರವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಅಶೋಕ್ ಪೂಜಾರಿ (46) ಬಂಧಿತ ಆರೋಪಿ. ದಿನೇಶ್ ಪೂಜಾರಿ ಎಂಬುವವರ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಇವರು 20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ದಿನೇಶ್ ಅವರು ಈ ವಿಚಾರವನ್ನು ಲೋಕಾಯುಕ್ತ ಪೊಲೀಸರ ಗಮನಕ್ಕೆ ತಂದಿದ್ದರು.
ಲಂಚದ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಪೋಲಿಸರು ದಾಳಿ ನಡೆಸಿ, ನಗದು ಸಹಿತ ಆರೋಪಿಯನ್ನು ಬಂಧಿಸಿದ್ದಾರೆ.
ಲೋಕಾಯುಕ್ತ ಎಸ್‌ಪಿ ಕುಮಾರ್‌ಚಂದ್ರ ಅವರ ನೇತೃತ್ವದಲ್ಲಿ, ಡಿವೈಎಸ್ಪಿ ಮಂಜುನಾಥ್, ಭಾರತಿ, ರಾಜೇಂದ್ರ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.