ಶಿಕ್ಷಣ

ವಿಶ್ವ ರಕ್ತದಾನ ದಿನಾಚರಣೆ

Views: 63

ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆಯ ಘಟಕ, ಜೆಸಿಐ ಕುಂದಾಪುರ ಸಿಟಿ ಹಾಗೂ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಕುಂದಾಪುರ ಘಟಕದ ಸಂಯುಕ್ತ ಆಶ್ರಯದಲ್ಲಿ ವಿಶ್ವ ರಕ್ತದಾನ ದಿನಾಚರಣೆಯ ಪ್ರಯುಕ್ತ ನಡೆದ ರಕ್ತದಾನ ಶಿಬಿರವನ್ನು ಕುಂದಾಪುರದ ತಹಶೀಲ್ದಾರರಾದ ಶ್ರೀಮತಿ ಶೋಭಾ ಲಕ್ಷ್ಮಿ ಉದ್ಘಾಟಿಸಿದರು.

ಈ ಸಂದರ್ಭ ರಕ್ತದಾನದ ಮಹತ್ವದ ಕುರಿತು ಅವರು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಯಾದ ಶ್ರೀ ಸೀತಾರಾಮ ನಕ್ಕತ್ತಾಯ, ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಕುಂದಾಪುರ ಘಟಕದ ಚೇರ್‌ಮೆನ್ ಶ್ರೀ ಜಯಕರ್ ಶೆಟ್ಟಿ, ಜೆಸಿಐ ಕುಂದಾಪುರ ಸಿಟಿಯ ಅಧ್ಯಕ್ಷೆ ಡಾ| ಸೋನಿ ಡಿಕೋಸ್ತಾ, ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಕುಂದಾಪುರ ಘಟಕದ ಸದಸ್ಯರಾದ ಶ್ರೀ ಶಿವರಾಮ್ ಶೆಟ್ಟಿ, ಶ್ರೀ ಸೀತರಾಮ ಶೆಟ್ಟಿ, ಶ್ರೀ ಮುತ್ತಯ್ಯ ಶೆಟ್ಟಿ, ಶ್ರೀ ಗಣೇಶ್ ಆಚಾರ್, ಶ್ರೀ ಸದಾನಂದ ಶೆಟ್ಟಿ, ಶ್ರೀ ಅಬ್ದುಲ್ ಬಶೀರ್ ಹಾಗೂ ಕುಂದಾಪುರ ಸಿಟಿ ಜೆಸಿಐನ ಸ್ಥಾಪಕಾಧ್ಯಕ್ಷ ಶ್ರೀ ಹುಸೇನ್ ಹೈಕಾಡಿ, ಪೂರ್ವಾಧ್ಯಕ್ಷರಾದ ಶ್ರೀ ರಾಘವೇಂದ್ರ ಚರಣ್ ನಾವಡ, ಶ್ರೀ ವಿಜಯ್ ಭಂಡಾರಿ, ಶ್ರೀ ಪ್ರಶಾಂತ್ ಹವಾಲ್ದಾರ್, ಜೇಸಿರೆಟ್ ಅಧ್ಯಕ್ಷೆ ಶ್ರೀಮತಿ ಪ್ರೇಮ, ಪೂರ್ವ ಜೇಸಿರೆಟ್ ಅಧ್ಯಕ್ಷೆ ಶ್ರೀಮತಿ ಸುವರ್ಣಾ ಅಲ್ಮೇಡಾ ಹಾಗೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಸಂಯೋಜಕರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ದೀಪಾ ಪೂಜಾರಿ ಉಪಸ್ಥಿತರಿದ್ದರು.

ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ಸಂಯೋಜಕರಾದ ಶ್ರೀ ಯೋಗೀಶ್ ಶ್ಯಾನುಭೋಗ್ ಸ್ವಾಗತಿಸಿ, ಶ್ರೀಮತಿ ಅವಿತಾ ಎಮ್. ಕೊರೆಯಾ ನಿರೂಪಿಸಿದರು.

Related Articles

Back to top button