ಧಾರ್ಮಿಕ

ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ 

Views: 28

ಕನ್ನಡ ಕರಾವಳಿ ಸುದ್ದಿ: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಎಲ್ಲಾ ಬಗೆಯ ಪ್ಲಾಸ್ಟಿಕ್ ಬಳಕೆಯನ್ನು ಆಗಸ್ಟ್ 15ರಿಂದ ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಆಗಸ್ಟ್ 15 ರಿಂದ ಪ್ಲಾಸ್ಟಿಕ್ ಮುಕ್ತ ದೇವಾಲಯ ಪ್ರಾರಂಭ ಮಾಡುತ್ತಿದ್ದೇವೆ. ದೇವಾಲಯಗಳಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಬಳಕೆ ಮಾಡಬಾರದು ಎಂದು ಸೂಚಿಸಿದ್ದಾರೆ.

ಈ ಆದೇಶ ಜಾರಿಗೆ 2 ತಿಂಗಳು ಸಮಯ ಕೊಡಲಾಗಿದ್ದು, ಆಗಸ್ಟ್ 15 ರಿಂದ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆಗೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದ್ದಾರೆ.

Related Articles

Back to top button
error: Content is protected !!