ಯುವಜನ

ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಮದುವೆ: ಆರೋಪಿಗೆ 21 ವರ್ಷ ಜೈಲು ಶಿಕ್ಷೆ

Views: 130

ಕನ್ನಡ ಕರಾವಳಿ ಸುದ್ದಿ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಒತ್ತಾಯದಿಂದ ಕರೆದುಕೊಂಡು ಹೋಗಿ ಮದುವೆಯಾಗಿ, ಅತ್ಯಾಚಾರವೆಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 21 ವರ್ಷ ಕಾರಾಗೃಹ ಶಿಕ್ಷೆ, 30 ಸಾವಿರ ರೂ. ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

ಜಿಲ್ಲೆಯ ಹರಿಹರ ನಗರ ನಿವಾಸಿ ಸಚಿನ್ ಶಿಕ್ಷೆಗೊಳಗಾದ ಆರೋಪಿ. ನನ್ನ ಮಗಳು ಅಪ್ರಾಪ್ತಳಾಗಿದ್ದು, ಆಕೆಯನ್ನು ಶಾಲೆಗೆ ಬಿಟ್ಟು ಬಂದ ನಂತರ ಮನೆಗೆ ಬಂದಿಲ್ಲ ಎಂದು 2022ರ ಡಿಸೆಂಬರ್ 21ರಂದು ತಾಯಿ ಮಹಿಳಾ ಠಾಣಾ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಅಂದಿನ ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ತನಿಖೆ ನಡೆಸಿದಾಗ ಆರೋಪಿ ಅಪ್ರಾಪ್ತೆ ಎಂದು ಗೊತ್ತಿದ್ದರು ಸಹ ಪುಸಲಾಯಿಸಿ ದಾವಣಗೆರೆಯಿಂದ ಚಿಕ್ಕಮಗಳೂರು ಜಿಲ್ಲೆಯ ಗ್ರಾಮವೊಂದಕ್ಕೆ ಕರೆದುಕೊಂಡು ಹೋಗಿ ಮನೆಯಲ್ಲಿ ಉಳಿದುಕೊಂಡು ನಾನು ನಿನ್ನನ್ನು ಮದುವೆಯಾಗಿರುತ್ತೇನೆಂದು ಬಲವಂತವಾಗಿ ಅತ್ಯಾಚಾರ ಎಸಗಿರುವುದು ತನಿಖೆಯಿಂದ ದೃಢಪಟ್ಟಿದ್ದು, ಆರೋಪಿ ವಿರುದ್ಧ ತನಿಖಾಧಿಕಾರಿ ನ್ಯಾಯಾಲಯಕ್ಕೆ ದೋಷರೋಪಣಾಪಟ್ಟಿ ಸಲ್ಲಿಸಿದ್ದರು. ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-೧ ನ್ಯಾಯಾಧೀಶರಾದ ಶ್ರೀರಾಮ ನಾರಾಯಣ ಹೆಗಡೆ ವಿಚಾರಣೆ ನಡೆಸಿ, ಆರೋಪ ಸಾಬೀತಾಗಿದ್ದರಿಂದ ಆರೋಪಿಗೆ 21 ವರ್ಷ ಕಾರಾಗೃಹ ಶಿಕ್ಷೆ, 30 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದ್ದಾರೆ. ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದು, ಬಂಧನದ ಅವಧಿ ಪರಿಗಣಿಸಿ ಶಿಕ್ಷಾ ಅವಧಿಯನ್ನು ಸೆಟ್ ಆಫ್ ಮಾಡಿ ಇನ್ನುಳಿದ ಶಿಕ್ಷೆಯನ್ನು ಅನುಭವಿಸುವಂತೆ ಆದೇಶಿಸಿದ್ದಾರೆ.

ಸಂತ್ರಸ್ತೆಗೆ 30 ಸಾವಿರ ರೂ. ದಂಡದ ಹಣ ಮತ್ತು ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ನೀಡುವಂತೆ ತೀರ್ಪು ನೀಡಿದ್ದಾರೆ. ಪಿರ್ಯಾದಿ ಪರವಾಗಿ ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್ ವಾದ ಮಂಡಿಸಿದ್ದರು.

Related Articles

Back to top button
error: Content is protected !!