ಶಿಕ್ಷಣ

ಸರಕಾರಿ ಶಾಲೆಯ 24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಅರೆಸ್ಟ್ 

Views: 142

ಕನ್ನಡ ಕರಾವಳಿ ಸುದ್ದಿ: ಹಿಮಾಚಲ ಪ್ರದೇಶದ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ 24 ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಶಾಲೆಯಲ್ಲಿ ನಡೆದ ಲೈಂಗಿಕ ಕಿರುಕುಳ ಸಮಿತಿಯ ಸಭೆಯಲ್ಲಿ ವಿದ್ಯಾರ್ಥಿಗಳು ಗಣಿತ ಶಿಕ್ಷಕನ ವಿರುದ್ಧ ಲಿಖಿತ ದೂರು ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

ಬಂಧಿತನ ವಿರುದ್ಧ ಪೋಕ್ಸ ಕೇಸ್ ದಾಖಲಾಗಿದೆ. ಆರೋಪಿಯನ್ನು ಭಾನುವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮೂರು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಪಡೆಯಲಾಗಿದೆ.

ಶಾಲೆಯಲ್ಲಿ ‘ಶಿಕ್ಷಾ ಸಂವಾದ’ ಕಾರ್ಯಕ್ರಮದ ಸಂದರ್ಭದಲ್ಲಿ, 8, 9 ಹಾಗೂ 10ನೇ ತರಗತಿಯ ವಿದ್ಯಾರ್ಥಿನಿಯರು ಶಿಕ್ಷಕನ ಕಿರುಕುಳದ ಬಗ್ಗೆ ಮುಖ್ಯ ಶಿಕ್ಷಕರಿಗೆ ದೂರು ನೀಡಿದ್ದರು. ದೂರಿನಲ್ಲಿ ಶಿಕ್ಷಕ ತಮ್ಮನ್ನು ಅನುಚಿತವಾಗಿ ಮುಟ್ಟಿದ್ದಾನೆ ಎಂದು ವಿದ್ಯಾರ್ಥಿನಿಯರು ಉಲ್ಲೇಖಿಸಿದ್ದಾರೆ.

Related Articles

Back to top button
error: Content is protected !!