ಇತರೆ

ಉಜಿರೆ ಲಾಡ್ಜ್ ನಲ್ಲಿ ವೇಶ್ಯಾವಟಿಕೆ:ಲಾಡ್ಜ್ ಬಂದ್ ಮಾಡಲು ನೋಟಿಸ್ ಜಾರಿ

Views: 147

ಕನ್ನಡ ಕರಾವಳಿ ಸುದ್ದಿ: ಉಜಿರೆ ಲಾಡ್ಜ್ ನಲ್ಲಿ ವೇಶ್ಯಾವಟಿಕೆ ನಡೆಸುತ್ತಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡ ಬೆನ್ನಲ್ಲೇ ಬೆಳ್ತಂಗಡಿ ಪೊಲೀಸರು ಲಾಡ್ಜ್ ಮೇಲೆ ಕ್ರಮ ಕೈಗೊಳ್ಳಲು ಉಜಿರೆ ಗ್ರಾಮ ಪಂಚಾಯತ್ ಗೆ ಪ್ರಕರಣದ ಬಗ್ಗೆ ವರದಿ ಸಲ್ಲಿಸಿದ್ದರು. ಈ ಬಗ್ಗೆ ಉಜಿರೆ ಗ್ರಾಮ ಪಂಚಾಯತ್ ಲಾಡ್ಜ್ ಮಾಲೀಕರಿಗೆ ಲಾಡ್ಜ್ ಬಂದ್ ಮಾಡಲು ನೋಟಿಸ್ ಜಾರಿ ಮಾಡಿದೆ.

ವೇಶ್ಯಾವಾಟಿಕೆ ನಡೆಸಲು ಯುವತಿಯನ್ನು ಕರೆತಂದು ಉಜಿರೆ ಶ್ರೀ ದುರ್ಗಾ ಲಾಡ್ಜ್ ನಲ್ಲಿ ಇರಿಸಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸರು ಜೂ.14 ರಂದು ರಾತ್ರಿ ಬೆಳ್ತಂಗಡಿ ಪೊಲೀಸರು ದಾಳಿ ಓರ್ವ ಯುವತಿಯನ್ನು ರಕ್ಷಣೆ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಿ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಮೂವರು ವಿರುದ್ಧ ಪ್ರಕರಣ ದಾಖಲಾಗಿತ್ತು.

ಉಜಿರೆಯ ಶ್ರೀ ದುರ್ಗಾ ಲಾಡ್ಜ್ ಮೇಲೆ ಕ್ರಮ ಕೈಗೊಳ್ಳಲು ಬೆಳ್ತಂಗಡಿ ಪೊಲೀಸರು ಉಜಿರೆ ಗ್ರಾಮ ಪಂಚಾಯತ್ ಗೆ ಜೂ.25 ರಂದು ಪ್ರಕರಣದ ಬಗ್ಗೆ ವರದಿ ಸಲ್ಲಿಸಿದ್ದರು. ವರದಿ ಸಲ್ಲಿಸಿದ ಬೆನ್ನಲ್ಲೇ ಉಜಿರೆ ಗ್ರಾಮ ಪಂಚಾಯತ್‌ ಅಧಿಕಾರಿಗಳು ಜೂ.26 ರಂದು ಲಾಡ್ಜ್. ಮಾಲೀಕ ಉಜಿರೆಯ ರಮೇಶ್ ಶೆಟ್ಟಿಗೆ ಮುಂದಿನ ಆದೇಶದವರೆಗೆ ಲಾಡ್ಜ್ ಬಂದ್ ಮಾಡಲು ನೋಟಿಸ್‌ ಜಾರಿ ಮಾಡಿದ್ದಾರೆ.

ಉಜಿರೆ ಶ್ರೀ ದುರ್ಗಾ ಲಾಡ್ಜ್ ಮಾಲೀಕ ಉಜಿರೆಯ ರಮೇಶ್ ಶೆಟ್ಟಿ, ಮ್ಯಾನೇಜರ್ ಸತೀಶ್‌ ಪೂಜಾರಿ, ಸಿಬ್ಬಂದಿ ಯೋಗೀಶ್ ಆಚಾರ್ಯ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Related Articles

Back to top button