ಆರೋಗ್ಯ
ಅಂತರಾಷ್ಟ್ರೀಯ ಯೋಗ ದಿನ: ಪ್ರಧಾನಿ ಮೋದಿ ಜೊತೆಯಲ್ಲಿ ವಿಶ್ವಸಂಸ್ಥೆ ಅಧಿಕಾರಿಗಳು ಮತ್ತು ಸದಸ್ಯ ರಾಷ್ಟ್ರಗಳು ಪಾಲ್ಗೊಳ್ಳುವಿಕೆ

Views: 0
ನ್ಯೂಯಾರ್ಕ್ ನಲ್ಲಿ ಅಂತರಾಷ್ಟ್ರೀಯ ಯೋಗ ದಿನದಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯಲಿರುವ ಒಂಭತ್ತನೇ ಅಂತರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ವಿಶ್ವಸಂಸ್ಥೆಯ ಅಧಿಕಾರಿಗಳು ಏಜೆನ್ಸಿ ಗಳು ಮತ್ತು ಸದಸ್ಯ ರಾಷ್ಟ್ರಗಳು ಭಾಗವಹಿಸಲಿದೆ.
ಜೂನ್ 21 ಅಂತರಾಷ್ಟ್ರೀಯ ಪ್ರಧಾನ ಕಚೇರಿಯಲ್ಲಿ ಮೋದಿಯವರು ಯೋಗ ಅಧಿವೇಶನವನ್ನು ನಡೆಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾರತೀಯ ನಾಯಕನೊಂದಿಗೆ ಪಾಲ್ಗೊಳ್ಳಲು ಉಸ್ಸುಕರಾಗಿದ್ದೇವೆ ಎಂದು ವಿಶ್ವಸಂಸ್ಥೆ ಅಧಿಕಾರಿಗಳು ತಿಳಿಸಿದ್ದಾರೆ.
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 77ನೇ ಅಧಿವೇಶನದ ಅಧ್ಯಕ್ಷ ಸೀಸಾಬಾ ಕೊರ್ಸಿ ಕೂಡ ಟ್ವಿಟ್ ಮಾಡಿ ಯೋಗ ದಿನಾಚರಣೆಯಲ್ಲಿ ಭಾಗವಹಿಸುವ ಸುಳಿವು ನೀಡಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಮೋದಿ ಯೋಗವು ಉತ್ತಮ ಆರೋಗ್ಯ ಮತ್ತು ಕ್ಷೇಮವನ್ನು ಹೆಚ್ಚಿಸಲು ಜಗತ್ತನ್ನು ಒಟ್ಟುಗೂಡಿಸುತ್ತದೆ ಎಂದು ಹೇಳಿದ್ದಾರೆ.