ಇತರೆ
ಕುಂಭಾಶಿಯ ಗೋಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ನಿಯಂತ್ರಣ ತಪ್ಪಿ ಲಾರಿಯ ಮುಂಭಾಗಕ್ಕೆ

Views: 169
ಕನ್ನಡ ಕರಾವಳಿ ಸುದ್ದಿ: ಕುಂದಾಪುರ ತಾಲೂಕಿನ ಕುಂಭಾಶಿಯ ಗೋಪಾಡಿ ಎಂಬಲ್ಲಿ ಕಾರು ಓವರ್ ಟೇಕ್ ಮಾಡುವ ಭರದಲ್ಲಿ ಲಾರಿಯ ಮುಂಭಾಗಕ್ಕೆ ಕಾರು ಸಿಲುಕಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.
ಗುಜರಾತಿನಿಂದ ಕೇರಳ ಕಡೆಗೆ ಹೋಗುತ್ತಿದ್ದ ಲಾರಿ, ಹಾಗೂ ಅದೇ ದಾರಿಯಲ್ಲಿ ಕುಂದಾಪುರದಿಂದ ಉಡುಪಿ ಕಡೆಗೆ ಚಲಿಸುತ್ತಿದ್ದ ಕಾರು ಓವರ್ ಟೆಕ್ ಮಾಡುವ ಭರದಲ್ಲಿ ಲಾರಿಗೆ ಡಿಕ್ಕಿ ಆಗಿ ಕಾರು ಲಾರಿಯ ಮುಂಭಾಗಕ್ಕೆ ಅಡ್ಡಲಾಗಿ ಸಿಲುಕಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರು ಮಹಿಳೆ ಸೇರಿ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.