ಆರೋಗ್ಯ
ವಕ್ವಾಡಿಯಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ

Views: 2
ಕುಂದಾಪುರ: ಗ್ರಾಮೀಣ ಭಾಗದಲ್ಲಿ ನಡೆಯುವ ಈ ಶಿಬಿರದಿಂದ ಜನರು ಸದುಪಯೋಗ ಪಡೆದುಕೊಂಡು ಎಲ್ಲರ ದೃಷ್ಟಿಯೂ ಬೆಳಗಲಿ ಎಂದು ಕಾಳಾವರ ಗ್ರಾಮ ಪಂಚಾಯತ್ ಸದಸ್ಯ ವಕ್ವಾಡಿ ರಮೇಶ್ ಶೆಟ್ಟಿ ಹೇಳಿದರು.
ಅವರು ಶನಿವಾರ ವಕ್ವಾಡಿ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ನಡೆದ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉಡುಪಿ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊರ್ಗಿ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಗ್ರಾಮ ಪಂಚಾಯತ್ ಕಾಳಾವರ, ಆರೋಗ್ಯ ಮತ್ತು ಕ್ಷೇಮ ಕೇಂದ್ರ ವಕ್ವಾಡಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಚಿತ ನೇತ್ರ ತಪಾಸಣೆ ಮತ್ತು ಪೊರೆ ಶಸ್ತ್ರ ಚಿಕಿತ್ಸೆ ಶಿಬಿರವನ್ನು ಉದ್ಘಾಟಿಸಿ,ಮಾತನಾಡಿದರು.
ಕೊರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಡಾ. ಪ್ರತಾಪ್ ಅಧ್ಯಕ್ಷತೆ ವಹಿಸಿದ್ದರು.
ಕಣ್ಣಿನ ದೃಷ್ಟಿ ಮತ್ತು ಪೊರೆ ಸಮಸ್ಯೆ ಇರುವವರು ಈ ಶಿಬಿರದ ಸದುಪಯೋಗ ಪಡೆದುಕೊಂಡರು. ಗ್ರಾಮೀಣ ಭಾಗದಲ್ಲಿ ನಡೆದ ಶಿಬಿರ ಯಶಸ್ವಿಯಾಗಿ ನಡೆಯಿತು.
,