ಇತರೆ
ಕಾಡಸಿದ್ದೇಶ್ವರ ಸ್ವಾಮೀಜಿಗಳ ಕಾರು ಅಪಘಾತ: ಇಬ್ಬರ ದುರ್ಮರಣ, ಸ್ವಾಮೀಜಿ ಗಂಭೀರ

Views: 0
ಬೆಳಗಾವಿಯಲ್ಲಿ ನಡೆದ ಕಾರು ಮತ್ತು ಕಂಟೇನರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸ್ವಾಮೀಜಿಯ ಇಬ್ಬರು ಸೇವಕರು ಸಾವನಪ್ಪಿದ್ದು, ಸ್ವಾಮೀಜಿ ಗಂಭೀರ ಗಾಯಗೊಂಡಿದ್ದಾರೆ.
ತಾಲೂಕಿನ ಕಾಕತಿ ಗ್ರಾಮದ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಬೆಳಗಾವಿ ತಾಲೂಕಿನ ಶಿವಪುರ ಗ್ರಾಮದ ಕಾಡಸಿದ್ದೇಶ್ವರ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಸ್ವಾಮೀಜಿ ಸೇವಕರಾದ ಪಾಂಡುರಂಗ ಜಾದವ್ ಪಂಚಾಕ್ಷರಿ ಹಿರೇಮಠ್ ಮೃತಪಟ್ಟವರು.
ಹಿಂದಿನ ಬಿಜೆಪಿ ಸರಕಾರ ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ರದ್ದುಗೊಳಿಸುವುದಾಗಿ ಕಾಂಗ್ರೆಸ್ ಸರ್ಕಾರ ತೀರ್ಮಾನಿಸಿತ್ತು. ರಾಜ್ಯ ಸರಕಾರದ ನಿರ್ಧಾರ ವಿರೋಧಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಸಂಘಟನೆಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಕಾಡಸಿದ್ದೇಶ್ವರ ಸ್ವಾಮೀಜಿ ಕಾರಲ್ಲಿ ಬೆಳಗಾವಿಗೆ ತೆರಳುತ್ತಿದ್ದ ಈ ವೇಳೆ ಅಪಘಾತ ಸಂಭವಿಸಿದೆ. ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






