ಇತರೆ

ತುಂಗಾ ನದಿಗೆ ಈಜಲು ತೆರಳಿದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲು

Views: 0

ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಕಾರ್ಕಳದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರು ಪಾಲಾಗಿದ್ದಾರೆ. ಇವರಲ್ಲಿ ಒಬ್ಬರ ಮೃತದೇಹ ಪತ್ತೆಯಾಗಿದೆ.

ತೀರ್ಥಳ್ಳಿ ತಾಲೂಕಿನ ತೀರ್ಥ ಮತ್ತೂರು ಗ್ರಾಮದ ಬಳಿ ತುಂಗಾ ನದಿಗೆ ಭಾನುವಾರ ಕಾರ್ಕಳದ ನಿಟ್ಟೆ ಕಾಲೇಜಿನ ಉಪನ್ಯಾಸಕರಾದ ಪುನೀತ್ (38) ಮತ್ತು ಬಾಲಾಜಿ (36 )ಈಜಲು ತೆರಳಿದ್ದರು.

ಈ ವೇಳೆ ಇಬ್ಬರು ನಾಪತ್ತೆಯಾಗಿದ್ದರು. ಅವರಲ್ಲಿ ಬಾಲಾಜಿ ಮೃತ ದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಉಪನ್ಯಾಸಕರು ತಮ್ಮ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದರು ತೀರ್ಥಹಳ್ಳಿ ಮಠದ ಸಮೀಪ ಇರುವ ಹೋಂ ಸ್ಟೇನಲ್ಲಿ ತಂಗಿದ್ದರು

ನಾಪತ್ತೆಯಾದ ಪುನೀತ್ ಶವಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ ತೀರ್ಥಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Related Articles

Back to top button
error: Content is protected !!